ಮೇ 3ನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಶಿಕ್ಷಣ ಸಚಿವ ನಾಗೇಶ್

bc nagesh
Published on

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಇದೇ ತಿಂಗಳ(ಮೇ) ಮೂರನೇ ವಾರದಲ್ಲಿ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಮಾತನಾಡಿದ ಸಚಿವರು, ಈಗಾಗಲೇ ಎಸ್ಸೆಸ್ಸೆಲ್ಸಿ ಪರೀಕ್ಷೆ ಉತ್ತರಪತ್ರಿಕೆಯ ಮೌಲ್ಯಮಾಪನ ಮುಗಿದಿದೆ. ಫಲಿತಾಂಶ ಪ್ರಕಟಿಸುವ ಕೊನೆಯ ಘಟ್ಟದಲ್ಲಿ ಕೆಲಸ ನಡೆಯುತ್ತಿದೆ. ಮೇ 3ನೇ ವಾರ ಫಲಿತಾಂಶ ಹೊರ ಬೀಳಲಿದೆ ಎಂದರು.

ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳ 3,444 ಕೇಂದ್ರಗಳಲ್ಲಿ ಮಾ.28ರಿಂದ ಏ.11ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆದಿತ್ತು. 34 ಶೈಕ್ಷಣಿಕ ಜಿಲ್ಲೆಗಳಲ್ಲಿ 234 ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net