More

    ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಮೌಲ್ಯಮಾಪನಕ್ಕೆ‌ ನಿರ್ಧಾರ

    ಬೆಂಗಳೂರು: ಕೇಂದ್ರ ಪುರಸ್ಕೃತ 100 ಕೋಟಿ ರೂ.ಗೂ ಹೆಚ್ಚಿನ ಅನುದಾನದ ಕಾರ್ಯಕ್ರಮಗಳ ಅನುಷ್ಠಾನ, ಹಣ ವಿನಿಯೋಗದ ಮೌಲ್ಯಮಾಪನ ನಡೆಸಲು ನಿರ್ಧರಿಸಲಾಗಿದೆ.

    ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕರ್ನಾಟಕ ಮೌಲ್ಯ ಮಾಪನ ಪ್ರಾಧಿಕಾರಕ್ಕೆ ಈ ಜವಾಬ್ದಾರಿ ಒಪ್ಪಿಸಲಾಗಿದೆ. ನಂತರ ಸುದ್ದಿಗೋಷ್ಠಿಯಲ್ಲಿ ಸಚಿವ ಎಸ್.ಸುರೇಶ್ ಕುಮಾರ್ ಈ ಮಾಹಿತಿ ನೀಡಿದರು.

    24 ಇಲಾಖೆಗಳಲ್ಲಿ 96 ಕೇಂದ್ರ ಪುರಸ್ಕೃತ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತಿದೆ. 2020-21ನೇ ಸಾಲಿನಲ್ಲಿ 39,601 ಕೋಟಿ ರೂ.ಗಳಲ್ಲಿ ಕೇಂದ್ರದ ಪಾಲು 18,100 ಕೋಟಿ ರೂ., 2021-22 ರಲ್ಲಿ ಒಟ್ಟು ಅನುದಾನ 38,078 ಕೋಟಿ ರೂ.ಗಳ ಪೈಕಿ ಕೇಂದ್ರದ ಪಾಲು 17 ಸಾವಿರ ಕೋಟಿ ರೂ.ಗಳಾಗಿದೆ. 11 ಕೇಂದ್ರ ಪುರಸ್ಕೃತ ಕಾರ್ಯಕ್ರಮ ಪರಿಶೀಲಿಸಿದ್ದಾರೆ. ಗ್ರಾಮ ಸಡಕ್ ಯೋಜನೆ, ಕುಡಿವ ನೀರಿನ ಕಾರ್ಯಕ್ರಮ, ಮಧ್ಯಾಹ್ನದ ಬಿಸಿಯೂಟ, ಸಮಗ್ರ ಶಿಕ್ಷಣ, ರಾಷ್ಟ್ರೀಯ ಆರೋಗ್ಯ ಅಭಿಯಾನ, ರಾಜ್ಯ ವಿಪತ್ತು ನಿಧಿಗೆ ಸಹಾಯಧನ, ಪೂರಕ ಪೌಷ್ಠಿಕಾಂಶ ಕಾರ್ಯಕ್ರಮ, ಪ್ರಧಾನ ಮಂತ್ರಿ ಅವಾಜ್ ಯೋಜನಾ ಕಾರ್ಯಕ್ರಮಗಳ ಪ್ರಗತಿಯನ್ನು ಸಿಎಂ ಪರಿಶೀಲನೆ ಮಾಡಿದ್ದಾರೆ ಎಂದು ಸುರೇಶ್​ ಕುಮಾರ್​ ವಿವರಿಸಿದರು.

    ಯೋಜನೆಗಳ ಪ್ರಗತಿ ಪೂರಕವಾಗಿದ್ದು, ಈವರೆಗೆ ರಾಜ್ಯಕ್ಕೆ 1289 ಕೋಟಿ ರೂ. ಬಿಡುಗಡೆಯಾಗಿದೆ. ಕಳೆದ ವರ್ಷ ಭೌತಿಕ ಪ್ರಗತಿ ನೂರರಷ್ಟು ಸಾಧಿಸಲಾಗಿದೆ. ನರೇಗಾದಡಿ ಜುಲೈ 18ರ ವರೆಗೆ 6 ಕೋಟಿ ಮಾನವ ದಿನ ಸೃಜಿಸಲಾಗಿದೆ. ಗ್ರಾಮ ಸಡಕ್ ಯೋಜನೆಯಡಿ ಪ್ರಸಕ್ತ ವರ್ಷ 5011 ಕಿ.ಮೀ ರಸ್ತೆ ನಿರ್ಮಾಣದ ಗುರಿಯಿದೆ ಎಂದು ಸುರೇಶ್ ಕುಮಾರ್ ವಿವರಿಸಿದರು.

    ಇದೆಂಥಾ ದುರ್ಬುದ್ಧಿ… ಆಂಬುಲೆನ್ಸ್​ಗೆ ದಾರಿ ಬಿಡದೆ ತೊಂದರೆ ಕೊಟ್ಟ

    ಆ ಪ್ರಾಪರ್ಟಿ ದೊಡ್ಡಮನೆಯವರದ್ದು, ಹಾಗಾಗಿ ದರ್ಶನ್​ಗೆ ಆಸ್ತಿ ಕೊಡಲ್ಲ ಅಂದೆ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts