More

    ಹುಲುಕೋಡಿನಲ್ಲಿ ವಿಜೃಂಭಣೆಯಿಂದ ಜರುಗಿದ ಜಾತ್ರೆ


    ಮಡಿಕೇರಿ: ಸೋಮವಾರಪೇಟೆ ತಾಲೂಕಿನ ಹಂಡ್ಲಿ ಗ್ರಾಪಂ ವ್ಯಾಪ್ತಿಯಲ್ಲಿ 600 ವರ್ಷಗಳ ಇತಿಹಾಸ ಹೊಂದಿರುವ ಹುಲುಕೋಡು ಶ್ರೀ ಕುಮಾರಲಿಂಗೇಶ್ವರಸ್ವಾಮಿ ವಾರ್ಷಿಕ ಜಾತ್ರಾ ಮಹೋತ್ಸವ ಬುಧವಾರ ವಿಜೃಂಭಣೆಯಿಂದ ಜರುಗಿತು.


    ಬೆಂಬಳೂರು ಶ್ರೀ ಬಾಣಂತಮ್ಮ ದೇವಿಯ 7 ಪುತ್ರರಲ್ಲಿ ಕುಮಾರಲಿಂಗೇಶ್ವರ ಮೂರನೇ ಪುತ್ರ. ಈತ ಹುಲುಕೋಡು ಗ್ರಾಮದಲ್ಲಿ ನೆಲೆಸಿರುವ ಹಿನ್ನೆಲೆಯಲ್ಲಿ ಬೆಂಬಳೂರು ಬಾಣಂತಮ್ಮ ಜಾತ್ರಾ ಮಹೋತ್ಸವದ ಮರುದಿನ ಹುಲುಕೋಡು ಕುಮಾರಲಿಂಗೇಶ್ವರ ಸ್ವಾಮಿಯ ವಾರ್ಷಿಕ ಜಾತ್ರಾ ಮಹೋತ್ಸವ ಆಚರಿಸುವುದು ಪ್ರತೀತಿ.


    ಶ್ರೀ ಕುಮಾರಲಿಂಗೇಶ್ವರ ಸ್ವಾಮಿಯ ದೇವಸ್ಥಾನದಲ್ಲಿ ದೇವರಿಗೆ ಗಂಗಾಸ್ನಾನ ಮಾಡಿಸಲು ಕಳಸದೊಂದಿಗೆ ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು. ನಂತರ ಆರತಿ ಬೆಳಗಿ, ದೇವರಿಗೆ ಈಡುಗಾಯಿ ಒಡೆಯುವ ಮೂಲಕ ದೇವರನ್ನು ದೇವಸ್ಥಾನದ ಒಳಗೆ ಬರ ಮಾಡಿಕೊಳ್ಳಲಾಯಿತು. ನಂತರ ದೇವರಿಗೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿಸಲಾಯಿತು. ಮಧ್ಯಾಹ್ನ 12 ಗಂಟೆಗೆ ಪಕ್ಕದ ಕಿತ್ತೂರು ಗ್ರಾಮ ಹಾಗೂ ಹಂಡ್ಲಿ ಗ್ರಾಮದಲ್ಲಿ ಶ್ರೀ ಕುಮಾರಲಿಂಗೇಶ್ವರ ದೇವರ ಅಡ್ಡಪಲ್ಲಕಿ ಮೆರವಣಿಗೆ ಮಾಡಲಾಯಿತು. ಮೆರವಣಿಗೆ ಮೂಲಕ ಬಂದ ದೇವರನ್ನು ಜಾತ್ರಾ ಬನದಲ್ಲಿರುವ ಗುಡಿಯಲ್ಲಿ ಇಡಲಾಯಿತು.

    ಭಕ್ತರು ಶ್ರೀ ಕುಮಾರಲಿಂಗೇಶ್ವರ ಸ್ವಾಮಿಗೆ ಪೂಜೆ, ಈಡುಗಾಯಿ ಒಡೆಯುವ ಮೂಲಕ ಹರಕೆ ಸಲ್ಲಿಸಿದರು. ಸ್ವಾಮಿಯನ್ನ್ನು ಅಡ್ಡಪಲ್ಲಕ್ಕಿ ಮೂಲಕ ಜಾತ್ರಾ ಸ್ಥಳದಿಂದ ಮೂಲ ಸ್ಥಾನಕ್ಕೆ ಕರೆತರಲಾಯಿತು. ನಂತರ ಗ್ರಾಮದಲ್ಲಿ ಜೋಡಿ ಅಡ್ಡಪಲ್ಲಕ್ಕಿ ಉತ್ಸವ ಮೆರವಣಿಗೆ ಉತ್ಸವ ಮೆರವಣಿಗೆ ನಡೆಯಿತು.

    ಜಾತ್ರೋತ್ಸವದಲ್ಲಿ ಹುಲುಕೋಡು, ಕಿತ್ತೂರು ಗ್ರಾಮಗಳು ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಿಂದ ನೂರಾರು ಭಕ್ತರು ಪಾಲ್ಗೊಂಡಿದ್ದರು. ಜಾತ್ರೋತ್ಸವದಲ್ಲಿ ಹೆಗ್ಗಡಹಳ್ಳಿ ಮಠಾದೀಶ ಷಡ್ಪಾವರ ಹಿತೇಶ್ವರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. ಭಕ್ತರಿಗೆ ಜಾತ್ರಾ ಸಮಿತಿಯಿಂದ ಅನ್ನಸಂತರ್ಪಣೆ ನಡೆಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts