More

    ವಿದ್ಯಾರ್ಥಿಗಳಿಗೆ ನಕಲಿ ವಿಮಾ ಬಾಂಡ್​ ಕೇಸ್​: ಶಾಸಕ ಗೌರಿಶಂಕರ್​ಗೆ ಎದುರಾಯ್ತು ಸಂಕಷ್ಟ

    ತುಮಕೂರು: ಸರ್ಕಾರಿ ಶಾಲಾ ಮಕ್ಕಳಿಗೆ ನಕಲಿ ವಿಮೆ ಪಾಲಿಸಿ ನೀಡಿದ್ದ ಪ್ರಕರಣದಲ್ಲಿ ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ. ಗೌರಿಶಂಕರ್​ಗೆ ಸಂಕಷ್ಟ ಎದುರಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದು, ಅ.22ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಶಾಸಕರಿಗೆ ಸೂಚಿಸಿದೆ.

    ಪ್ರಕರಣದ ಹಿನ್ನೆಲೆ: 2018ರಲ್ಲಿ ನಡೆದಿದ್ದ ಸಾರ್ವತ್ರಿಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಗೌರಿಶಂಕರ್ ಸ್ಪರ್ಧಿಸಿದ್ದರು. ಈ ಸಂದರ್ಭದಲ್ಲಿ ಕ್ಷೇತ್ರದ ವ್ಯಾಪ್ತಿಯಲ್ಲಿ ಇರುವ ಸುಮಾರು ಐವತ್ತು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಅಂದಾಜು 40 ಸಾವಿರ ನಕಲಿ ವಿಮೆ ಪಾಲಿಸಿ ನೀಡಿದ್ದಾರೆ. ಇದರಲ್ಲಿ 16 ಸಾವಿರ ವಿದ್ಯಾರ್ಥಿಗಳಿಗೆ ನಕಲಿ ಸಮೂಹ ವಿಮೆ ಪಾಲಿಸಿ ನೀಡಿದ್ದಾರೆ ಎಂದು ಆರೋಪಿಸಿ ಮಾಜಿ ಶಾಸಕ ಬಿ.ಸುರೇಶ್ ಗೌಡ ಅವರ ಸಹೋದರ ರಮೇಶ್ ಬೆಟ್ಟಯ್ಯ ಎಂಬುವವರು ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗೆ ದೂರು ಸಲ್ಲಿಸಿದ್ದರು. ದೂರಿನ ಮೇರೆಗೆ ಕ್ರಮ ಜರುಗಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಲಾಗಿತ್ತು. ಅದರಂತೆ 2020ರ ಜುಲೈ 18 ರಂದು ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು ಗೌರಿಶಂಕರ್ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಈ ಎಫ್ಐಆರ್ ರದ್ದು ಪಡಿಸಲು ಗೌರಿಶಂಕರ್ ಮಾಡಿಕೊಂಡ ಮನವಿಯನ್ನು ಹೈಕೋರ್ಟ್ ಈ ಹಿಂದೆಯೇ ತಿರಸ್ಕರಿಸಿತ್ತು.

    ಸರ್ಕಾರಿ ಶಾಲಾ ಮಕ್ಕಳಿಗೆ ನಕಲಿ ವಿಮೆ ಪಾಲಿಸಿ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು ಶಾಸಕ ಡಿ.ಸಿ. ಗೌರಿಶಂಕರ್ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದರು. ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಿದ್ದರು.

    ಶಾಸಕ ಶ್ರೀನಿವಾಸ್​ಗೆ ಎಚ್​ಡಿಕೆ ಮಾಸ್ಟರ್ ಸ್ಟ್ರೋಕ್! 25ಕ್ಕೆ ಗುಬ್ಬಿಯಲ್ಲೇ ಸಮಾವೇಶ, ಪರ್ಯಾಯ ನಾಯಕತ್ವ ಸೃಷ್ಟಿ

    ಲವ್​-ಸೆಕ್ಸ್​ ದೋಖಾ: ಎಎಸ್​ಐ ಸೇರಿ 8 ಮಂದಿ ವಿರುದ್ಧ ಎಫ್​ಐಆರ್! ಯುವತಿ ಸತ್ತ 11 ದಿನಕ್ಕೆ ಸಿಕ್ತು ಡೆತ್​ನೋಟ್​

    ಪರಸ್ತ್ರೀ ಜತೆ ಗ್ರಾಪಂ ಅಧ್ಯಕ್ಷೆ ಗಂಡನ ಕಾಮದಾಟ! ವಾಟ್ಸ್ಆ್ಯಪ್​ ಗ್ರೂಪ್​ಗೆ ತನ್ನದೇ ಫೋಟೋ ತಾನೇ ಹಾಕಿಕೊಂಡ…

    ಬೇಯಿಸಿದ ಮೊಟ್ಟೆ ತಿಂದು ಪ್ರಾಣಬಿಟ್ಟ ಮಹಿಳೆ! ಮೊಟ್ಟೆ ಪ್ರಿಯರನ್ನ ಬೆಚ್ಚಿಬೀಳಿಸುತ್ತೆ ಈ ಘಟನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts