ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ

ಹಿರೀಸಾವೆ : ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯೊಬ್ಬರ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಆಕೆಯ ಕುಟುಂಬದ ಸದಸ್ಯರು ನೋವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ
ಹಿರೀಸಾವೆ ಹೋಬಳಿ ಹೊನ್ನಶೆಟ್ಟಿಹಳ್ಳಿ ನಿವಾಸಿ ಎಚ್.ಎಸ್. ರಮ್ಯಾ(28) ಜ.9ರಂದು ತಮ್ಮ ಪತಿ ಮಂಜೇಗೌಡರ ಜತೆಯಲ್ಲಿ ಬೈಕ್‌ನಲ್ಲಿ ಹಿರಿಸಾವೆ ಹೋಬಳಿ ಕಾವಲುಬಾರ ಗ್ರಾಮದಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ತಲೆಗೆ ತೀವ್ರ ಗಾಯವಾಗಿತ್ತು. ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಗಾಯಾಳುವನ್ನು ಪರೀಕ್ಷಿಸಿದ ನರರೋಗ ತಜ್ಞ ಡಾ. ಗುರುಪ್ರಸಾದ್ ಅವರ ತಂಡವು ಆಕೆಯ ಮಿದುಳು ನಿಷ್ಕ್ರಿಯವಾಗಿರುವುದನ್ನು ಖಚಿತಪಡಿಸಿದರು. ಇದಾದ ನಂತರ ರಮ್ಯಾ ಕುಟುಂಬದವರು ಆದಿಚುಂಚನಗಿರಿ ಆಸ್ಪತ್ರೆಗೆ ಅಂಗಾಂಗಳನ್ನು ದಾನ ಮಾಡಲು ನಿರ್ಧರಿಸಿದರು. ಆಸ್ಪತ್ರೆಯ ಮುಖ್ಯಸ್ಥ ಡಾ.ಕೆ.ಎಂ.ಶಿವಕುಮಾರ್ ಮಾರ್ಗದರ್ಶನದಂತೆ ನುರಿತ ತಜ್ಞರ ಸಹಾಯದಿಂದ ಅಂಗಾಂಗಗನ್ನು ದಾನ ಮಾಡಿದರು.
ಒಂದು ಮೂತ್ರಪಿಂಡವನ್ನು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಯೊಬ್ಬರಿಗೆ ಆದಿಚುಂಚನಗಿರಿಯ ಮೂತ್ರಪಿಂಡ ತಜ್ಞರಾದ ಡಾ.ನರೇಂದ್ರ, ಡಾ.ಅನಿಲ್ ಮತ್ತು ಡಾ.ನಂದೀಶ್ ಅವರ ಸಹಕಾರದಿಂದ ಯಶಸ್ವಿಯಾಗಿ ಕಿಡ್ನಿ ಕಸಿ ಮಾಡಲಾಯಿತು. ಜತೆಗೆ ಅದೇ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಕಣ್ಣುಗಳನ್ನು ಅಂಗಾಂಗ ಕಸಿ ಮಾಡಲಾಯಿತು. ಹೃದಯ ಮತ್ತು ಹೃದಯದ ನಾಳಗಳನ್ನು ಬೆಂಗಳೂರಿನ ನಾರಾಯಣ ಹೃದಯಾಲಯ, ಮತ್ತೊಂದು ಕಿಡ್ನಿಯನ್ನು ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆ, ಯಕೃತ್ತನ್ನು (ಲಿವರ್) ಬೆಂಗಳೂರಿನ ಬಿ.ಜಿ.ಎಸ್. ಅಪೊಲೋ ಆಸ್ಪತ್ರೆಗೆ ಜೀರೋ ಟ್ರಾಫಿಕ್ ಮೂಲಕ ರವಾನಿಸಲಾಯಿತು. ಪತ್ನಿ ಸಾವಿನ ನೋವಲ್ಲೂ ಅಂಗಾಂಗಗಳನ್ನು ದಾನ ಮಾಡಿ ಐವರು ರೋಗಿಗಳಿಗೆ ಜೀವದಾನ ಮಾಡಿದ ರಮ್ಯಾ ಪತಿ ಜವರೇಗೌಡ ಹಾಗೂ ಕುಂಟುಂಬಸ್ಥರ ನಡೆ ಮಾದರಿಯಾಗಿದ್ದು, ಸಾರ್ವಜನಿಕ ವಲಯದಿಂದ ಮೆಚ್ಚುಗೆ ವ್ಯಕ್ತವಾಗಿದೆ.

Share This Article

ಮನೆಯಲ್ಲೇ ಮಾಡಿ ಟೇಸ್ಟಿ ಚಿಲ್ಲಿ ಚೀಸ್​​ ನೂಡಲ್ಸ್​​; ಇಲ್ಲಿದೆ ಸಿಂಪಲ್​ ವಿಧಾನ | Recipe

ಫ್ಯಾಮಿಲಿ ಜತೆ ಹೋಟೆಲ್​ಗೆ ಹೋದರೆ ಫ್ರೈಡ್​ರೈಸ್​​, ನೂಡಲ್ಸ್​​, ಗೋಬಿ ಹೀಗೆ ಚೈನೀಸ್​​​ ಫುಡ್ ಮೊದಲ ಆಯ್ಕೆಯಾಗಿರುತ್ತದೆ.…

ಈ ಕಾಯಿಲೆಯಿಂದ ಬಳಲುತ್ತಿರುವವರು ತಪ್ಪಾಗಿಯೂ ಬೀಟ್ರೂಟ್​ ಸೇವಿಸಬೇಡಿ; ನಿಮಗಾಗಿ ಹೆಲ್ತಿ ಟಿಪ್ಸ್​​ | Health Tips

ಬೀಟ್ರೂಟ್ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾದ ತರಕಾರಿಯಾಗಿದೆ. ಇದು ಜೀವಸತ್ವಗಳು, ಖನಿಜಾಂಶಗಳು ಮತ್ತು ಉತ್ಕರ್ಷಣ…

ಗರ್ಭನಿರೋಧಕ ಮಾತ್ರೆಗಳಿಂದ ಅಪಾಯ ತಪ್ಪಿದ್ದಲ್ಲ; ಇಲ್ಲಿದೆ ಸಂಶೋಧನೆಯಲ್ಲಿ ಬಹಿರಂಗವಾದ ಅಸಲಿ ಸಂಗತಿ |Health Tips

ಗರ್ಭನಿರೋಧಕ ಮಾತ್ರೆಗಳನ್ನು ತೆಗೆದುಕೊಂಡು ಅನಗತ್ಯ ಗರ್ಭಧಾರಣೆಯನ್ನು ತಡೆಗಟ್ಟುವುದು ಅತ್ಯಂತ ಜನಪ್ರಿಯ ವಿಧಾನವಾಗಿದೆ. ಪ್ರಪಂಚದಾದ್ಯಂತ ಅಂದಾಜು 250…