More

    ಬೆಳಗಾವಿಯಲ್ಲಿ ಪ್ರವಾಹ ಭೀತಿ: ನದಿ ನೀರಲ್ಲಿ ಕೊಚ್ಚಿಹೋದ ರೈತ

    ಬೆಳಗಾವಿ: ಮಹಾರಾಷ್ಟ್ರ ಹಾಗೂ ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಬೆಳಗಾವಿ ಜಿಲ್ಲೆಯಲ್ಲಿ ರೈತರೊಬ್ಬರು ನೀರಿನಲ್ಲಿ ಕೊಚ್ಚಿಹೋಗಿದ್ದಾರೆ.

    ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಕಾಕತಿ ಗ್ರಾಮದ ರೈತ ಸಿದ್ರಾಯಿ ದೊಡ್ಡರಾಮ ಸುತಗಟ್ಟಿ (65) ಮಾರ್ಕಂಡೇಯ ನದಿಯ ಪ್ರವಾಹದಲ್ಲಿ ಕೊಚ್ಚಿ ಹೋಗಿರುವವ. ಶುಕ್ರವಾರ ಕೃಷಿ ಕೆಲಸ ಮುಗಿಸಿ ಬರುವಾಗ ನದಿಯಲ್ಲಿ ಕೈ ಕಾಲು ತೊಳೆಯಲು ಹೋದಾಗ ಕಾಲು ಜಾರಿ ಬಿದ್ದು ಕೊಚ್ಚಿಹೋಗಿದ್ದಾರೆ.

    ನಿನ್ನೆ ಸಂಜೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದ ಕಾರಣಕ್ಕೆ ಸಿದ್ರಾಯರ ಶೋಧ ಕಾರ್ಯ ಅರ್ಧಕ್ಕೆ ನಿಲ್ಲಿಸಿಸಲಾಗಿತ್ತು. ಇಂದು ಪೊಲೀಸ್ ಮತ್ತು ಅಗ್ನಿಶಾಮಕ ತಂಡ ರೈತನ ಶೋಧ ಕಾರ್ಯ ಮುಂದುವರಿಸಲಿದೆ.

    ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ 97 ಸಾವಿರ ಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಮಲಪ್ರಭಾ, ಘಟಪ್ರಭಾ ಸೇರಿ ಸಪ್ತನದಿಯ ಒಳ ಹರಿವು ಹೆಚ್ಚಿದೆ. ನದಿ ಪಾತ್ರದ ಜನರಲ್ಲಿ ಪ್ರವಾಹದ ಭೀತಿ ಆವರಿಸಿದೆ.

    ಸತ್ತು ಮಲಗಿದ್ದವ ಕರುಳ ಕೂಗಿಗೆ ಓಗೊಟ್ಟು ಮತ್ತೆ ಬದುಕಿದ! ಅಂತ್ಯಸಂಸ್ಕಾರ ವೇಳೆ ನಡೆದ ಪವಾಡ ಕೇಳಿದ್ರೆ ಶಾಕ್​ ಆಗ್ತೀರಿ

    ಪತ್ನಿಯ ಗೆಳತಿಯರು ಮನೆಗೆ ಬರುತ್ತಿದ್ದಂತೆ ಅವರ ಬಟ್ಟೆ ಬಿಚ್ಚುತ್ತಾನೆ ಗಂಡ! ಬೆಚ್ಚಿಬೀಳಿಸುತ್ತೆ ದಂಪತಿ ಕೃತ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts