ಮಾಜಿ ಸಚಿವ ವಿರೂಪಾಕ್ಷಪ್ಪ ಅಗಡಿ ನಿಧನ

virupakshappa
Published on

ಕೊಪ್ಪಳ: ಮಾಜಿ ಸಚಿವ ವಿರೂಪಾಕ್ಷಪ್ಪ ಅಗಡಿ ಅವರು ಮಂಗಳವಾರ ಬೆಳಗ್ಗೆ ನಿಧನರಾದರು. ಇವರಿಗೆ 81 ವರ್ಷ ವಯಸ್ಸಾಗಿತ್ತು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಚಿವರು ಕೊಪ್ಪಳದ ಕಲ್ಯಾಣ ನಗರದ ಮನೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಮೃತರಿಗೆ ಮೂವರು ಮಕ್ಕಳಿದ್ದಾರೆ.

1985-89ರವರೆಗೆ ಜನತಾ ಪಾರ್ಟಿಯ ಶಾಸಕರಾಗಿದ್ದ ವಿರೂಪಾಕ್ಷಪ್ಪ, ಎಸ್​.ಆರ್.​ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದರು. ಬೊಮ್ಮಾಯಿ ನೇತೃತ್ವದ ಸರ್ಕಾರ ಪತನವಾದ ಹಿನ್ನೆಲೆ ಒಂದು ವಾರ ಮಾತ್ರ ಸಚಿವರಾಗಿದ್ದರು. ಅದೇ ವರ್ಷ ನಡೆದ ಚುನಾವಣೆಯಲ್ಲಿ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಸೋಲುಂಡಿದ್ದರು. 1998ರಲ್ಲಿ ಲೋಕಶಕ್ತಿ ಪಕ್ಷದಿಂದ, 2004ರಲ್ಲಿ ಜೆಡಿಎಸ್​ನಿಂದ ಲೋಕಸಭಾ ಚುನಾವಣೆಗ ಸ್ಪರ್ಧಿಸಿದ್ದರು. ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net