More

    ಜೀವ ಉಳಿಸಿದ ಔಷಧ ವಿಜ್ಞಾನ ಕ್ಷೇತ್ರ

    ಕೆ.ಎಂ.ದೊಡ್ಡಿ: ಕರೊನಾ ಸಂದರ್ಭದಲ್ಲಿ ಔಷಧ ವಿಜ್ಞಾನ ಕ್ಷೇತ್ರ ಕೋವಿಡ್ ವ್ಯಾಕ್ಸಿನ್ ಕಂಡು ಹಿಡಿದು ಕೋಟ್ಯಂತರ ಜನರ ಜೀವ ಉಳಿಸಿತು ಎಂದು ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮೆಡಿಕಲ್ ಸೂಪರಿಂಟೆಂಡೆಂಟ್ ಹಾಗೂ ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯ ಡಾ.ಪಿ.ವಿ.ಶ್ರೀಧರ್ ತಿಳಿಸಿದರು.

    ಇಲ್ಲಿನ ಕುವೆಂಪು ಸಭಾಗಂಣದಲ್ಲಿ ಭಾರತೀ ಔಷಧ ವಿಜ್ಞಾನ ಕಾಲೇಜಿನ ಪದವಿ ಪದಗ್ರಹಣ ಸಮಾರಂಭವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು. ಕರೊನಾ ಬಂದು ದೇಶದಲ್ಲಿ ಹಲವರ ಪ್ರಾಣ ಹಾನಿ ಮಾಡಿತ್ತು. ವ್ಯಾಕ್ಸಿನ್ ಕಂಡು ಹಿಡಿಯುವ ಮೂಲಕ ಜನರ ಪ್ರಾಣ ಉಳಿಸಲು ಸಹಕಾರಿಯಾಯಿತು ಎಂದರು.

    ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಸಂದರ್ಭದಲ್ಲಿ ಏಕಾಗ್ರತೆ ಅಳವಡಿಸಿಕೊಳ್ಳುವ ಮೂಲಕ ಉನ್ನತ ವ್ಯಾಸಂಗದತ್ತ ಗಮನ ನೀಡಿ ಉದ್ಯೋಗದತ್ತ ಹೆಜ್ಜೆ ಹಾಕಲು ಕಾರ್ಯೋನ್ಮುಖರಾಗಬೇಕು ಎಂದು ಕಿವಿಮಾತು ಹೇಳಿದರು.

    ಗ್ರಾಮೀಣ ಪ್ರದೇಶದಲ್ಲಿ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಭಾರತೀ ವಿದ್ಯಾಸಂಸ್ಥೆಯ ಹೆಗ್ಗಳಿಕೆಗೆ ಹಿಡಿದ ಕೈಗನ್ನಡಿಯಾಗಿದೆ. ನಗರ ಪ್ರದೇಶದಲ್ಲಿ ದುಬಾರಿ ಹಣ ನೀಡಿ ಶಿಕ್ಷಣ ಪಡೆಯಬೇಕಾದ ಪರಿಸ್ಥಿತಿಯಲ್ಲೂ ಹಳ್ಳಿಗಾಡಿನ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಬಿಇಟಿ ಸಂಸ್ಥೆ ಶಿಕ್ಷಣ ನೀಡುತ್ತಿರುವುದು ಉತ್ತಮ ಬೆಳವಣಿಗೆ ಎಂದರು.

    ಮಾಜಿ ಸಂಸದ ಜಿ.ಮಾದೇಗೌಡ ಅವರು ಗ್ರಾಮೀಣ ಪ್ರದೇಶದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಂಕಲ್ಪ ತೊಟ್ಟು ಕುಗ್ರಾಮ ಕೆ.ಎಂ.ದೊಡ್ಡಿಯಲ್ಲಿ ಶಿಕ್ಷಣ ಸಂಸ್ಥೆ ತೆರೆದು ಲಕ್ಷಾಂತರ ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದಾರೆ. ಅಲ್ಲದೆ ಬಿಇಟಿ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿದ ಲಕ್ಷಾಂತರ ವಿದ್ಯಾರ್ಥಿಗಳು ವಿದೇಶದಲ್ಲಿ ಉದ್ಯೋಗದಲ್ಲಿರುವುದು ಸಂಸ್ಥೆ ಸಾಧನೆಗರಿ ವಿದೇಶದಲ್ಲೂ ಕಂಪಿಸಿದೆ ಎಂದರು.

    ಔಷಧ ವಿಜ್ಞಾನದಲ್ಲಿ ಪದವಿ ಪಡೆದ ವಿದ್ಯಾಥಿಗಳು ಸಹ ವೈದ್ಯಕೀಯ ಶಿಕ್ಷಣದಷ್ಟೇ ಮಹತ್ವ ಪಡೆದುಕೊಂಡಿದೆ. ಹಳ್ಳಿಗಾಡಿನ ಜನತೆ ಇಂತಹ ಕೋರ್ಸ್‌ಗಳ ಮಾಹಿತಿ ಪಡೆದು ಮಕ್ಕಳನ್ನು ಸೇರಿಸುವ ಮೂಲಕ ಸಾರ್ವಜನಿಕ ಸೇವೆಗಳಿಗೆ ಅವಕಾಶ ಕಲ್ಪಿಸಿ ಎಂದರು.

    ಬಿಇಟಿ ಸಂಸ್ಥೆಯ ಕಾರ್ಯದರ್ಶಿ ಬಿ.ಎಂ.ನಂಜೇಗೌಡ ಮಾತನಾಡಿ, ಔಷಧ ವಿಜ್ಞಾನಕ್ಕೆ ಭಾರಿ ಬೇಡಿಕೆ ಇದ್ದು, ಕಾಲೇಜಿನಲ್ಲಿ ಉತ್ತಮ ಬೋಧಕ ವರ್ಗವನ್ನು ಹೊಂದಿದೆ. ಬೋಧನಾ ವಿಷಯದಲ್ಲಿ ಯಾವುದೇ ರಾಜಿ ಇಲ್ಲದೆ ಶಿಕ್ಷಣ ಕಲಿಸಬೇಕು. ವಿದ್ಯಾರ್ಥಿಗಳಲ್ಲಿ ಪ್ರತಿಭೆಯನ್ನು ಹೊರತರುವಲ್ಲಿ ಶಿಕ್ಷಕರು ಮಹತ್ವದ ಪಾತ್ರ ವಹಿಸಬೇಕು ಎಂದು ಕಿವಿಮಾತು ಹೇಳಿದರು.

    ಗ್ರಾಮಾಂತರ ಪ್ರದೇಶದಲ್ಲಿ ಔಷಧ ವಿಜ್ಞಾನ ಕಾಲೇಜು ತೆರೆದು ವಿವಿಧ ಕೋರ್ಸ್‌ಗಳನ್ನು ಆರಂಭಿಸಿದ್ದು, ಇವುಗಳನ್ನು ಪೂರೈಸಿ ಕೊಂಡಿರುವ ವಿದ್ಯಾರ್ಥಿಗಳಿಗೆ ಉದ್ಯೋಗ ಕಟ್ಟಿಟ್ಟ ಬುತ್ತಿಯಾಗಿದೆ. ಈಗಾಗಲೇ ಲಕ್ಷಾಂತರ ಮಂದಿ ಉದ್ಯೋಗದಲ್ಲಿದ್ದಾರೆ ಎಂದು ತಿಳಿಸಿದರು.

    ಭಾರತೀ ಹೆಲ್ತ್ ಸೈನ್ಸ್ ನಿರ್ದೇಶಕ ಡಾ.ಟಿ.ತಮಿಜ್‌ಮಣಿ ಮಾತನಾಡಿ, ಭಾರತೀ ಔಷಧ ವಿಜ್ಞಾನ ಕಾಲೇಜು ವಿಶ್ವವಿದ್ಯಾಲಯ ಮಟ್ಟದ ನಂಬರ್ ಒನ್ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಸಂಸ್ಥೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದರಿಂದ ಕಾಲೇಜಿನ ವಿದ್ಯಾರ್ಥಿಗಳು ಚಿನ್ನದ ಪದಕ ಬಾಚಿಕೊಳ್ಳುತ್ತಿದ್ದರೆ ಎಂದರು.

    ಭಾರತೀ ಔಷಧ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ.ಟಿ.ಬಾಲಸುಬ್ರಮಣ್ಯಂ, ಕಿರುಗಾವಲು ಜಿ.ಮಾದೇಗೌಡ ಔಷಧ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಸಿ.ಎಸ್.ಜಗದೀಶ್, ವಿವಿಧ ವಿಭಾಗದ ಮುಖ್ಯಸ್ಥರಾದ ಡಾ.ಬಿ.ಎಸ್.ಸುರೇಶ್, ಡಾ.ಎಸ್.ಪ್ರಾರ್ಥಿಬನ್, ಡಾ. ಪ್ರಮೀಳಾ, ಡಾ.ವ್ನಿೇಶ್ವರಿ, ಸ್ವರೂಪ ಸತ್ಯ , ಡಾ.ನವೀನ್‌ಕುಮಾರ್ ಸೇರಿದಂತೆ ಹಲವರಿದ್ದರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts