ವಾಕಿಂಗ್​ ವೇಳೆ ಅಪಘಾತ: ‘ಕರಿಯ’ ಸಿನಿಮಾ ನಿರ್ಮಾಪಕ ಆನೇಕಲ್​ ಬಾಲರಾಜ್​ ಸಾವು

ಬೆಂಗಳೂರು: ‘ಕರಿಯ’, ‘ಕರಿಯ 2’ ಸಿನಿಮಾ ನಿರ್ಮಾಪಕ ಆನೇಕಲ್​ ಬಾಲರಾಜ್​ (58) ಅಪಘಾತಕ್ಕೀಡಾಗಿ ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ 8 ಗಂಟೆಗೆ ಪುಟ್ಟೇನಹಳ್ಳಿ ಸಮೀಪದ ಗೌರವ್​ನಗರದಲ್ಲಿ ರಸ್ತೆಬದಿ ಕಾರು ನಿಲುಗಡೆ ಮಾಡಿ ಎಂದಿನಂತೆ ವಾಕಿಂಗ್​ಗೆ ಹೋಗಲು ರಸ್ತೆ ದಾಟುತ್ತಿದ್ದರು. ಆ ವೇಳೆ ವೇಗವಾಗಿ ಬಂದ ಪಲ್ಸರ್​ ಬೈಕ್​ ಕಾರನ್ನು ಹಿಂದಿಕ್ಕುವ ಭರದಲ್ಲಿ ಬಾಲರಾಜ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲರಾಜ್​ ರಸ್ತೆಗೆ ಬಿದ್ದು ತಲೆ ಹಿಂಬದಿಗೆ ಗಂಭೀರ ಗಾಯವಾಗಿತ್ತು. ಸ್ಥಳೀಯರು ಜೆ.ಪಿ. ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ … Continue reading ವಾಕಿಂಗ್​ ವೇಳೆ ಅಪಘಾತ: ‘ಕರಿಯ’ ಸಿನಿಮಾ ನಿರ್ಮಾಪಕ ಆನೇಕಲ್​ ಬಾಲರಾಜ್​ ಸಾವು