ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ: ಹಾಸ್ಯಕಲಾವಿದ ಮೋಹನ್ ಜೂನೇಜ ಇನ್ನಿಲ್ಲ

Mohan juneja
Published on

ಬೆಂಗಳೂರು: ಕನ್ನಡ ಚಿತ್ರರಂಗದ ಹೆಸರಾಂತ ಹಾಸ್ಯಕಲಾವಿದ ಮೋಹನ್ ಜೂನೇಜ ಅವರು ಶನಿವಾರ ಬೆಳಗ್ಗೆ ನಿಧನರಾದರು.

ಶುಕ್ರುವಾರ ರಾತ್ರಿ ತೀವ್ರ ಅನಾರೋಗ್ಯ ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಚಿಕ್ಕಬಾಣಾವರದ ಸಪ್ತಗಿರಿ ಹಾಸ್ಪಿಟಲ್​ಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಶನಿವಾರ ಬೆಳಗ್ಗೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು.

ಮೋಹನ್ ಜುನೇಜಾ ಅವರು ಕನ್ನಡ ಹಿರಿತೆರೆ ಮತ್ತು ಕಿರುತೆರೆಯಲ್ಲಿ ಸಕ್ರಿಯವಾಗಿದ್ದರು. 'ವಠಾರ' ಸೀರಿಯಲ್​ನಿಂದ ಜನಪ್ರಿಯರಾದ ಮೋಹನ್​ ನಂತರ ಹಲವಾರು ಚಿತ್ರಗಳಲ್ಲಿ ಪೋಷಕ ನಟರಾಗಿ ಮತ್ತು ಹಾಸ್ಯನಟನಾಗಿ ರಂಜಿಸಿದ್ದಾರೆ. `ಚೆಲ್ಲಾಟ' ಚಿತ್ರದ ಮಧುಮಗನ ಪಾತ್ರ ಇವರಿಗೆ ತುಂಬಾ ಪ್ರಸಿದ್ಧಿ ತಂದುಕೊಟ್ಟಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net