ಗಂಗೊಳ್ಳಿ: ಮ್ಯಾಂಗನೀಸ್ ರಸ್ತೆಯ ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.
ಬೆಂಕಿ ನಂದಿಸುವಲ್ಲಿ ಯಶ್ವಸಿ
ಮಂಜುನಾಥ ಖಾರ್ವಿ ಎಂಬುವರ ಲಕ್ಷ್ಮೀನಾರಾಯಣ ಎಂಟರ್‌ಪ್ರೈಸಸ್ ಎಂಬ ಬೋಟ್ ಮತ್ತು ದೋಣಿಗಳ ಬಿಡಿ ಭಾಗ ಮಾರಾಟದ ಅಂಗಡಿಯಲ್ಲಿ ಸೋಮವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಸ್ಥಳೀಯರು ಅಂಗಡಿಯ ಬೀಗ ಒಡೆದು ಬೆಂಕಿ ನಂದಿಸುವಲ್ಲಿ ಯಶ್ವಸಿಯಾಗಿದ್ದಾರೆ.
ಸ್ಥಳೀಯರ ಸಮಯ ಪ್ರಜ್ಞೆ
ಘಟನಾ ಸ್ಥಳಕ್ಕೆ ಕುಂದಾಪುರ ಅಗ್ನಿಶಾಮಕ ದಳ ದೌಡಾಯಿಸಿದ್ದು ಅಷ್ಟರೊಳಗೆ ಬೆಂಕಿಯನ್ನು ಸಂಪೂರ್ಣ ನಂದಿಸಲಾಗಿತ್ತು. ಅಂಗಡಿ ಮಾಲೀಕರು ಮಧ್ಯಾಹ್ನ ಅಂಗಡಿಗೆ ಬೀಗ ಹಾಕಿ ಊಟಕ್ಕೆ ಹೋದಾಗ ಈ ಘಟನೆ ನಡೆದಿದ್ದು, ಸ್ಥಳೀಯರ ಸಮಯ ಪ್ರಜ್ಞೆಯಿಂದ ಭಾರಿ ದೊಡ್ಡ ಅಗ್ನಿ ದುರಂತವೊಂದು ತಪ್ಪಿದಂತಾಗಿದೆ.
ಗಂಗೊಳ್ಳಿ ಪೊಲೀಸ್ ಠಾಣೆ ಉಪನಿರೀಕ್ಷಕ ಹರೀಶ್ ಆರ್. ಭೇಟಿ ನೀಡಿ ಪರಿಶೀಲನೆ ನಡೆಸಿದರು.