More

    ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ

    ರಾಯಚೂರು: ಕಾರಿನ ಇಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಜನರು ಆತಂಕಕ್ಕೆ ಒಳಗಾದ ಘಟನೆ ನಗರದ ರಿಮ್ಸ್ ಆಸ್ಪತ್ರೆಯಲ್ಲಿನ ವಾಹನ ನಿಲುಗಡೆ ಸ್ಥಳದಲ್ಲಿ ಬುಧವಾರ ಜರುಗಿದೆ.
    ಲಿಂಗಸುಗೂರು ತಾಲೂಕಿನ ಅನ್ವರಿ ಗ್ರಾಮ ಟಿ.ಈರಣ್ಣ ಎನ್ನುವವರಿಗೆ ಸೇರಿದ ಟಾಟಾ ಇಂಡಿಗೋ ಕಾರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಾಹನ ನಿಲುಗಡೆ ಸ್ಥಳದಲ್ಲಿ ನಿಲ್ಲಿಸಿದ್ದ ಕಾರ್ ಸ್ಟಾರ್ಟ್ ಮಾಡಲು ಹೋದಾಗ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
    ಸ್ಥಳದಲ್ಲಿದ್ದವರು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಸಾಧ್ಯವಾಗದ ಕಾರಣ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು. ಬೆಂಕಿಯಿಂದಾಗ ಕಾರ್‌ನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಅಕ್ಕಪಕ್ಕದಲ್ಲಿ ಹಲವಾರು ಕಾರ್‌ಗಳನ್ನು ನಿಲ್ಲಿಸಿದ್ದರಿಂದ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts