ಮಂಗಳೂರಲ್ಲಿ ಬೆಳ್ಳಂಬೆಳಗ್ಗೆ ಧಗಧಗಿಸಿದ ಎಲೆಕ್ಟ್ರಿಕ್ ಸ್ಕೂಟರ್ ಶೋ ರೂಂ

New Project(8)
Published on

ಮಂಗಳೂರು: ನಗರದ ನಾಗುರಿಯಲ್ಲಿರುವ ಎಲೆಕ್ಟ್ರಿಕ್ ಸ್ಕೂಟರ್ ಶೋ ರೂಂ ಶುಕ್ರವಾರ ಬೆಳಗ್ಗೆ ಬೆಂಕಿಗಾಹುತಿಯಾಗಿದೆ.

ದಟ್ಟ ಹೊಗೆ ಕಾಣಿಸಿಕೊಂಡು ಬೆಂಕಿಯ ಕೆನ್ನಾಲಗೆ ಹೊರಗೆ ಚಾಚುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಕಟ್ಟಡದ ಒಳಗಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ. ಇ ಸ್ಕೂಟರ್​ಗಳೂ ಬೆಂಕಿಗಾವುತಿಯಾಗಿವೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net