More

    ಕೇಂದ್ರದ ಮಾಜಿ ಸಚಿವ, ಹಿರಿಯ ರಾಜಕಾರಣಿ ಆರ್​.ಎಲ್​.ಜಾಲಪ್ಪ ಇನ್ನಿಲ್ಲ

    ಕೋಲಾರ: ಕೇಂದ್ರದ ಮಾಜಿ ಸಚಿವ, ಹಿರಿಯ ರಾಜಕಾರಣಿ ಆರ್​.ಎಲ್​. ಜಾಲಪ್ಪ (94) ಇಂದು ರಾತ್ರಿ 7.35ರ ಸುಮಾರಿಗೆ ನಿಧನರಾದರು.

    ಶ್ವಾಸಕೋಶ ಹಾಗೂ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ ಜಾಲಪ್ಪ ಅವರಿಗೆ ಒಂದೂವರೆ ತಿಂಗಳಿಂದ ಕೋಲಾರದ ಆರ್.ಎಲ್. ಜಾಲಪ್ಪ ಆಸ್ಪತ್ರೆಯ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಕೊಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಮಾತ್ರವಲ್ಲ ಜಾಲಪ್ಪ ಅವರ ಸಂಬಂಧಿಕರು ನೇತ್ರದಾನ ಮಾಡಿದ್ದು, ಕೆಲವೇ ಕ್ಷಣಗಳಲ್ಲಿ ಕಣ್ಣುಗಳನ್ನು ಪಡೆಯಲಾಗುವುದು ಎಂದು ಆರ್.ಎಲ್​. ಜಾಲಪ್ಪ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಶೀಲಾ ತಿಳಿಸಿದ್ದಾರೆ. ಜಾಲಪ್ಪ ಅವರು ಪತ್ನಿ ವಿಜಯಲಕ್ಷ್ಮೀ ಹಾಗೂ ಮೂವರು ಪುತ್ರರು, ಓರ್ವ ಪುತ್ರಿ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

    ಕೋಲಾರದ ಟಮಕದಲ್ಲಿನ ದೇವರಾಜ ಅರಸು ಮೆಡಿಕಲ್ ಕಾಲೇಜು ಕ್ಯಾಂಪಸ್​ನಲ್ಲಿ ಇಂದು ರಾತ್ರಿ ಹತ್ತು ಗಂಟೆಯವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಪಾರ್ಥಿವ ಶರೀರವನ್ನು ಅವರ ಸ್ವಗ್ರಾಮಕ್ಕೆ ಕೊಂಡೊಯ್ಯಲಾಗುವುದು. ನಾಳೆ ಸಂಜೆ ನಾಲ್ಕು ಗಂಟೆಗೆ ತೂಬುಗೆರೆ ಗ್ರಾಮದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಬಳಿಕ ದೊಡ್ಡಬಳ್ಳಾಪುರದ ಆರ್.ಎಲ್.ಜಾಲಪ್ಪ ಕ್ಯಾಂಪಸ್​​ನಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.

    1925ರ ಅಕ್ಟೋಬರ್ 19ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಗ್ರಾಮದಲ್ಲಿ ಜನಿಸಿದ ಜಾಲಪ್ಪ, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ವಿದ್ಯಾಭ್ಯಾಸ ಮುಗಿಸಿದ್ದರು. ಇವರ ಪೂರ್ಣ ಹೆಸರು ಆರ್. ಲಕ್ಷ್ಮಿನಾರಾಯಣಪ್ಪ ಜಾಲಪ್ಪ. 1996ರಿಂದ 2009ರವರೆಗೆ ನಾಲ್ಕು ಬಾರಿ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಜಾಲಪ್ಪ, ಎಚ್​.ಡಿ.ದೇವೇಗೌಡರ ಸಂಪುಟದಲ್ಲಿ ಕೇಂದ್ರದ ಸಚಿವರಾಗಿದ್ದರು. ಕೇಂದ್ರ ಜವಳಿ(ಟೆಕ್ಸ್ ಟೈಲ್) ಖಾತೆ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.

    ಕೇಂದ್ರದ ಮಾಜಿ ಸಚಿವ, ಹಿರಿಯ ರಾಜಕಾರಣಿ ಆರ್​.ಎಲ್​.ಜಾಲಪ್ಪ ಇನ್ನಿಲ್ಲ
    ತೂಬಗೆರೆಯಲ್ಲಿ ಜಾಲಪ್ಪನವರು ವಾಸಿಸುತ್ತಿದ್ದ ಹಳೇಮನೆ.

    1980ರಲ್ಲಿ ಜನತಾ ಪಾರ್ಟಿಗೆ ಸೇರ್ಪಡೆಯಾದ ಜಾಲಪ್ಪ, 1989ರಲ್ಲಿ ಜನತಾ ದಳಕ್ಕೆ ಬಂದರು. ಈಡಿಗ ಸಮುದಾಯದ ಪ್ರಬಲ ನಾಯಕರಾಗಿ ಗುರುತಿಸಿಕೊಂಡರು. ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಸಿದರು. ರಾಮಕೃಷ್ಣ ಹೆಗಡೆ ಅವರ ಸಂಪುಟದಲ್ಲಿ ಸಹಕಾರ ಹಾಗೂ ಕಂದಾಯ ಸಚಿವರಾಗಿದ್ದರು. ರಾಜಕೀಯದ ಜತೆಗೆ ಕೃಷಿ ಮತ್ತು ಶಿಕ್ಷಣ ಕ್ಷೇತ್ರದಲ್ಲೂ ಅತೀವ ಆಸಕ್ತಿ ಹೊಂದಿದ್ದ ಜಾಲಪ್ಪ, ದೇವರಾಜ ಅರಸು ಮೆಡಿಕಲ್ ಕಾಲೇಜು ಹಾಗೂ ಆರ್.ಎಲ್. ಜಾಲಪ್ಪ ಆಸ್ಪತ್ರೆ ಸಂಶೋಧನಾ ಕೇಂದ್ರದ ಅಧ್ಯಕ್ಷರಾಗಿದ್ದರು.

    ಅಯ್ಯೋ, ವಿಧಿಯೇ ನೀನೆಷ್ಟು ಕ್ರೂರಿ? ಮುದ್ದಾದ ಯುವತಿ ಬಾಳಿಗೆ ಕೊಳ್ಳಿ ಇಟ್ಟಿದ್ದೇಕೆ? ಮನಕಲಕುತ್ತೆ ಈ ಸ್ಟೋರಿ

    ಕೆಎಸ್ಸಾರ್ಟಿಸಿ ಬಸ್​- ಕಾರು ಅಪಘಾತ: ಮದುವೆ ಆರತಕ್ಷತೆಗೆ ಹೊರಟಿದ್ದ ಮೂವರು ಮಹಿಳೆಯರು ಸ್ಥಳದಲ್ಲೇ ಸಾವು

    ಮದ್ವೆ ಸಂಭ್ರಮ ಬೆನ್ನಲ್ಲೇ ಸೂತಕ ಛಾಯೆ: ಪತ್ನಿ-ಮಗಳ ಜತೆ ಹೇಮಾವತಿ ನಾಲೆಗೆ ಹಾರಿ ಇಂಜಿನಿಯರ್ ಆತ್ಮಹತ್ಯೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts