More

    ಮಾಜಿ ಶಾಸಕ, ಹಿರಿಯ ರಾಜಕೀಯ ಮುತ್ಸದ್ದಿ ಎ.ಜಿ.ಕೊಡ್ಗಿ ನಿಧನ

    ಕುಂದಾಪುರ: ಮಾಜಿ ಶಾಸಕ, ಹಿರಿಯ ರಾಜಕೀಯ ಮುತ್ಸದ್ದಿ ಎ.ಜಿ.ಕೊಡ್ಗಿ (93) ಅನಾರೋಗ್ಯದಿಂದ ಸೋಮವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

    ಕಳೆದ ವಾರ ಮಾಜಿ ಶಾಸಕರಿಗೆ ಡೆಂಘೆ ಜ್ವರ ಕಾಣಿಸಿಕೊಂಡಿತ್ತು. ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಸೋಮವಾರ ನಿಧನರಾದರು.

    ಎ.ಜಿ.ಕೊಡ್ಗಿ ಅವರು ಪೂರ್ಣ ಹೆಸರು ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ. 1972 ಮತ್ತು 1978ರಲ್ಲಿ ಬೈಂದೂರು ಕ್ಷೇತ್ರದ ಶಾಸಕರಾಗಿದ್ದರು. ಕಾಂಗ್ರೆಸ್‌ನಲ್ಲಿದ್ದ ಅವರು ಕಾಂಗ್ರೆಸ್ ಇಬ್ಭಾಗವಾದಾಗ ಅರಸು ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದರು. 1993ರಲ್ಲಿ ಬಿಜೆಪಿ ಸೇರಿ ಪಕ್ಷದ ರಾಜ್ಯ ಉಪಾಧ್ಯಕ್ಷ ಸಹಿತ ಹಲವು ಮಹತ್ವದ ಹುದ್ದೆಗಳನ್ನು ನಿಭಾಯಿಸಿದ್ದರು. ಮೂರನೇ ಹಣಕಾಸು ಆಯೋಗದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಪತ್ನಿ ಹಾಗೂ ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕೊಡ್ಗಿ, ರಾಜ್ಯ ಆಹಾರ ನಿಗಮ ಉಪಾಧ್ಯಕ್ಷ ಕಿರಣ್ ಕೊಡ್ಗಿ, ರೈತಸಂಘ ಅಧ್ಯಕ್ಷ ಅಶೋಕ್ ಕೊಡ್ಗಿ ಸೇರಿ ಐವರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ. ಅಮಾಸೆಬೈಲಿನಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಅಂತ್ಯಸಂಸ್ಕಾರ ನೆರವೇರಲಿದೆ.

    ಲೈಂಗಿಕ ದೌರ್ಜನ್ಯ, ಮಹಿಳೆಗೆ 118 ಹೊಲಿಗೆ

    ಗೊರವನಹಳ್ಳಿ ಸಮೀಪ ಘೋರ ಕೃತ್ಯ: 3 ವರ್ಷದ ಬಳಿಕ ಸಿಕ್ಕಿಬಿದ್ದವ ಬಾಯ್ಬಿಟ್ಟ ರಹಸ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts