More

    ಎರಡು ತಿಂಗಳೊಳಗೆ ನಾಲ್ಕನೇ ಗ್ಯಾರಂಟಿ ಜಾರಿ

    ಹಾನಗಲ್ಲ: ಬೆಲೆ ಏರಿಕೆಯಿಂದ ಬಸವಳಿದಿರುವ ಕುಟುಂಬಗಳಿಗೆ ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯಡಿ 2 ಸಾವಿರ ರೂ. ಆರ್ಥಿಕ ನೆರವು ನೀಡುವ ಮಹತ್ವಾಕಾಂಕ್ಷಿ ಯೋಜನೆ ಇಡೀ ವಿಶ್ವದಲ್ಲೇ ಮೊದಲನೆಯದು ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

    ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಗೃಹಲಕ್ಷ್ಮೀ ಯೋಜನೆಯ ನೋಂದಣಿ ಕೇಂದ್ರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
    ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಗೃಹಲಕ್ಷ್ಮಿ ಯೋಜನೆಗೆ ಈಗಾಗಲೇ ಚಾಲನೆ ಸಿಕ್ಕಿದೆ. ಕಾಂಗ್ರೆಸ್ ಸರ್ಕಾರ ರಚನೆಯಾದ ಎರಡು ತಿಂಗಳೊಳಗೆ ನಾಲ್ಕನೇ ಗ್ಯಾರಂಟಿ ಜಾರಿಗೆ ಬಂದಿದೆ. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ರಾಜ್ಯದ 1.28 ಕೋಟಿ ಕುಟುಂಬಗಳಿಗೆ 2 ಸಾವಿರ ರೂಪಾಯಿ ಆರ್ಥಿಕ ಸೌಲಭ್ಯ ದೊರೆಯಲಿದೆ ಎಂದರು.

    ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಜೀವನ ನಡೆಸುವುದು ಕಷ್ಟಸಾಧ್ಯವಾಗಿದೆ. ಇಂಥ ಸಂದರ್ಭದಲ್ಲಿ ಜನಸಾಮಾನ್ಯರ ನೆರವಿಗೆ ಧಾವಿಸಲು ಗೃಹಲಕ್ಷ್ಮಿ ಯೋಜನೆ ಜಾರಿಗೆ ತರುವುದಾಗಿ ಕಾಂಗ್ರೆಸ್ ಚುನಾವಣೆ ಸಂದರ್ಭದಲ್ಲಿ ಹೇಳಿತ್ತು. ಇದೀಗ ಯೋಜನೆ ಅನುಷ್ಠಾನಗೊಳಿಸಿದೆ. ಮುಂದಿನ ತಿಂಗಳು ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಗೊಳ್ಳಲಿದೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದರು.

    ಶಾಸಕ ಮಾನೆ ಹಲವು ಫಲಾನುಭವಿಗಳಿಗೆ ಯೋಜನೆಯ ಮಂಜೂರಾತಿ ಆದೇಶ ಪತ್ರ ವಿತರಿಸಿದರು. ತಹಸೀಲ್ದಾರ್ ಶಶಿಧರ ಮಾಡ್ಯಾಳ, ತಾಪಂ ಇಒ ಕೆ.ಎಂ. ಮಲ್ಲಿಕಾರ್ಜುನ, ಸಿಡಿಪಿಒ ರಂಗನಾಥ ಸಿ. ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts