More

    ಕೋವಿಡ್ ಭೀತಿಗೆ ಬಾರದ ಸಂಬಂಧಿಕರು: ಹಿಂದು ವ್ಯಕ್ತಿಯ ಅಂತ್ಯಸಂಸ್ಕಾರ ನೆರವೇರಿಸಿದ ಮುಸ್ಲಿಂ ಯುವಕರು

    ಕೊಪ್ಪಳ: ಕೋವಿಡ್​ ಭೀತಿ ದಟ್ಟವಾಗಿದ್ದರೂ ಮಾನವೀಯತೆ ಇನ್ನೂ ಜೀವಂತವಾಗಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಉಸಿರಾಟ ಸಮಸ್ಯೆಯಿಂದ ಮೃತಪಟ್ಟ ವೃದ್ಧನ ಅಂತ್ಯಸಂಸ್ಕಾರಕ್ಕೆ ಕೋವಿಡ್​ ಭೀತಿಯಲ್ಲಿ ಯಾವೊಬ್ಬ ಸಂಬಂಧಿಕರೂ ಬಾರದ ಸಂದರ್ಭದಲ್ಲಿ ಮುಸ್ಲಿಂ ಯುವಕರು ಹಿಂದು ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿಸಿದ ಘಟನೆ ಘಟನೆ ಕೊಪ್ಪಳದಲ್ಲಿ ಸಂಭವಿಸಿದೆ.

    ಕೊಪ್ಪಳದ ವಿಕಾಸ ನಗರದ 85 ವರ್ಷದ ವೃದ್ಧರೊಬ್ಬರು ನಿನ್ನೆ ರಾತ್ರಿ ಉಸಿರಾಟ ಸಮಸ್ಯೆಯಿಂದ ಮೃತಪಟ್ಟಿದ್ದರು. ಇವರ ಪುತ್ರ ಕೋವಿಡ್ ಸೋಂಕು ತಗುಲಿ ಆಸ್ಪತ್ರೆ ಸೇರಿದ್ದಾರೆ. ಹೀಗಾಗಿ, ಮೃತ ವ್ಯಕ್ತಿಯ ಅಂತ್ಯ ಸಂಸ್ಕಾರ ಮಾಡಲು ಜನ ಹಿಂದೇಟು ಹಾಕಿದ್ದರು. ಇಂಹತ ಸಂದರ್ಭದಲ್ಲಿ ಜಮಾತೇ ಇಸ್ಲಾಂ ಸಂಘಟನೆ ಯುವಕರು ಹಿಂದೂ ಪದ್ಧತಿಯಂತೆ ಗವಿಮಠದ ಹಿಂಭಾಗದ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಈ ಕಾರ್ಯಕ್ಕೆ ಹ್ಯೂಮನಿಟೇರಿಯನ್ ರಿಲೀಫ್ ಸೊಸೈಟಿ (ಎಚ್​ಆರ್​ಎಸ್​)ಯ ಸದಸ್ಯರು ಸಾಥ್​ ಕೊಟ್ಟಿದ್ದಾರೆ. ಇನ್ನು ಮೃತನ ಕುಟುಂಬದ ಅಸಹಾಯಕತೆಯನ್ನೇ ಬಂಡವಾಳ ಮಾಡಿಕೊಂಡ ಆಂಬುಲೆನ್ಸ್​ ಚಾಲಕನೊಬ್ಬ 2 ಕಿ.ಮೀ. ದೂರ‌ದಲ್ಲಿರುವ ಸ್ಮಶಾನಕ್ಕೆ ಶವ ಸಾಗಿಸಲು ಹೆಚ್ಚುವರಿ ಹಣ ಪಡೆದಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಇದನ್ನೂ ಓದಿರಿ ಕಾರಿನಲ್ಲೇ ಟಿವಿ ಸೀರಿಯಲ್​ ನಟಿಯ ಬೆತ್ತಲೆ ದೃಶ್ಯ ಸೆರೆ! ಮುಂದೆ ಆಗಿದ್ದೆಲ್ಲವೂ ಅವಾಂತರ

    ಕಾರಿನಲ್ಲೇ ಟಿವಿ ಸೀರಿಯಲ್​ ನಟಿಯ ಬೆತ್ತಲೆ ದೃಶ್ಯ ಸೆರೆ! ಮುಂದೆ ಆಗಿದ್ದೆಲ್ಲವೂ ಅವಾಂತರ

    ಸಿನಿಮಾ ಮತ್ತು ರಾಜಕೀಯಕ್ಕೆ ಶಾಶ್ವತ ಗುಡ್ ​ಬೈ ಹೇಳಿದ ರಮ್ಯಾ! ಇನ್ನೆಂದೂ ಬಣ್ಣದ ಲೋಕಕ್ಕೆ ಬರಲ್ಲ ಎಂದ ಮೋಹಕ ತಾರೆ

    ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ಪ್ರೇಮಿಗಳು ಗ್ರಾಮದ ಜಮೀನೊಂದರಲ್ಲಿ ಶವವಾಗಿ ಪತ್ತೆ! ಆ ರಾತ್ರಿ ಆಗಿದ್ದೇನು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts