ರೋಣ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಉಳಿವಿಗಾಗಿ ಮತ್ತು ಸಿಬ್ಬಂದಿಯ ಹಿತರಕ್ಷಣೆಗಾಗಿ ತಾಲೂಕಿನ ಕರ್ಕಿ ಕಟ್ಟಿ ಗ್ರಾಮದ ಗಾಂಧಿವಾದಿ ಮುತ್ತಣ್ಣ ತಿರ್ಲಾಪುರವರು ರೋಣ ಬಸ್ ನಿಲ್ದಾಣದಿಂದ ಬೆಂಗಳೂರಿನ ಕೇಂದ್ರ ಬಸ್ ನಿಲ್ದಾಣಕ್ಕೆ ಶುಕ್ರವಾರ ಪಾದಯಾತ್ರೆ ಆರಂಭಿಸಿದರು.
ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಗುಲಗಂಜಿ ಮಠದ ಗುರುಪಾದ ಮಹಾಸ್ವಾಮೀಜಿ, ಕೆಎಸ್‌ಆರ್‌ಟಿಸಿಯನ್ನು ಉಳಿಸಿ ಬೆಳೆಸುವುದು ಕೇವಲ ಸರ್ಕಾರದ ಕೆಲಸವಲ್ಲ. ಅದು ಎಲ್ಲ ನಾಗರಿಕರ ಹೊಣೆಯಾಗಿದೆ. ಈ ಸಂಸ್ಥೆಯಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿರುವ ಚಾಲಕ ಮತ್ತು ನಿರ್ವಾಹಕರ ಜತೆ ಸಹಕಾರದಿಂದ ವರ್ತಿಸಬೇಕು ಎಂದರು.
ಅಬ್ದುಲ್‌ಸಾಬ್ ಹೊಸಮನಿ ಮಾತನಾಡಿ, ಅರ್ಥ ವ್ಯವಸ್ಥೆಗೆ ಸಾರಿಗೆ ಸಂಸ್ಥೆಗಳ ಕೊಡುಗೆ ಮಹತ್ವದ್ದಾಗಿದೆ. ಪ್ರತಿಭಟನೆ ವೇಳೆ ಬಸ್‌ಗಳಿಗೆ ಬೆಂಕಿ ಇಡುವುದು, ಹಾನಿ ಮಾಡುವುದನ್ನು ಮಾಡಬಾರದು ಎಂದರು. ವೆಂಕಣ್ಣ ಬಂಗಾರಿ, ರಾಜ್ಯ ರೈತ ಸಂಘದ ಮಹಿಳಾ ಘಟಕದ ಉಪಾಧ್ಯಕ್ಷೆ ಲೀಲಾ ಚಿತ್ರಗಾರ, ನಿವೃತ್ತ ಇಂಜಿನಿಯರ್ ಜಗದೀಶ ಮಡಿವಾಳರ, ನಿವೃತ್ತ ಎಪಿಎಂಸಿ ಕಾರ್ಯದರ್ಶಿ ಮಹದೇವಪ್ಪ ಹೊಸಮನಿ, ಅಬ್ದುಲ್ ಸಾಬ್ ಹೊಸಮನಿ ಅಭಿಮಾನಿ ಬಳಗದ ಅಧ್ಯಕ್ಷ ಶಂಕರ ದಂಡಿನ, ರೈತ ಸಂಘದ ಕಾರ್ಯದರ್ಶಿ ದೊಡ್ಡಬಸಪ್ಪ ನವಲಗುಂದ, ಸಿದ್ದಪ್ಪ ಗದಗಿನ, ಮುತ್ತಣ್ಣ ಕಟಗೇರಿ, ಉಪಸ್ಥಿತರಿದ್ದರು.
ಸಾರಿಗೆ ಸಂಸ್ಥೆ ಉಳಿವಿಗಾಗಿ ಗಾಂಧಿವಾದಿಯ ಪಾದಯಾತ್ರೆ
You Might Also Like
ಮಧ್ಯಾಹ್ನ, ರಾತ್ರಿ ಊಟದಲ್ಲಿ ಜಾಸ್ತಿ ಉಪ್ಪು ಸೇವಿಸಿದ್ರೆ ಕ್ಯಾನ್ಸರ್ ಬರೋದು ಪಕ್ಕಾ! ಇರಲಿ ಎಚ್ಚರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳಿಗೆ ಬಾಳೆಹಣ್ಣು ಕೊಡುವ ಮುನ್ನ ಈ ವಿಚಾರಗಳು ನಿಮಗೆ ಗೊತ್ತಿರಲಿ ಇಲ್ಲದಿದ್ರೆ ಆರೋಗ್ಯ ಕೆಡಬಹುದು ಎಚ್ಚರ!
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ತೂಕ ಕಳೆದುಕೊಂಡಿದ್ದೀರಾ? ಲಘುವಾಗಿ ಪರಿಗಣಿಸಬೇಡಿ, ನಿಮಗೆ ಈ ಆರೋಗ್ಯ ಸಮಸ್ಯೆಗಳಿರಬಹುದು!
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…