ರಾತ್ರೋರಾತ್ರಿ ಚಿತ್ರದುರ್ಗದಲ್ಲಿ ಗಣಪತಿ ವಿಗ್ರಹ ಧ್ವಂಸ, ದಕ್ಷಿಣ ಕನ್ನಡದಲ್ಲಿ ಗಣಪತಿ ಕಟ್ಟೆಗೂ ಹಾನಿ

ganesha
Published on

ಚಿತ್ರದುರ್ಗ/ ಮಂಗಳೂರು: ಗಣಪತಿ ಹಬ್ಬದಲ್ಲೂ ಕಿಡಿಗೇಡಿಗಳು ವಿಕೃತ ಮನಸ್ಥಿತಿ ಮೆರೆದಿದ್ದಾರೆ.

ಚಿತ್ರದುರ್ಗದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ವಿಗ್ರಹವನ್ನು ಧ್ವಂಸಗೊಳಿಸಿದ್ದಾರೆ. ಅತ್ತ ಮಂಗಳೂರಲ್ಲಿ ಗಣಪತಿ ಕಟ್ಟೆಗೂ ಹಾನಿ ಮಾಡಿದ್ದಾರೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು ಹಿರೇಹಳ್ಳಿ ಗ್ರಾಮದಲ್ಲಿ ಹಬ್ಬದ ಹಿನ್ನೆಲೆ ಶುಕ್ರವಾರ ಗಣಪತಿ ವಿಗ್ರಹವನ್ನ ಪ್ರತಿಷ್ಠಾಪಿಸಲಾಗಿತ್ತು. ಅಂದು ರಾತ್ರಿ ಯಾರೋ ಕಿಡಿಗೇಡಿಗಳು ಮೂರ್ತಿಯನ್ನು ದ್ವಂಸಗೊಳಿಸಿದ್ದಾರೆ. ಅಲಂಕಾರಕ್ಕೆ ಬಳಸಿದ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಉದನೆ ಎಂಬಲ್ಲಿ ಶುಕ್ರವಾರ ರಾತ್ರಿ ಗಣಪತಿ ಕಟ್ಟೆಗೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಅಲಂಕಾರಕ್ಕೆ ಬಳಸಿದ್ದ ಬಾಳೆಕಂದನ್ನೂ ತುಂಡರಿಸಿದ್ದಾರೆ. ಕಲ್ಲು ಎತ್ತಿಹಾಕಿ ಕಟ್ಟೆಯ ಮೆಟ್ಟಿಲಿಗೂ ಹಾನಿ ಮಾಡಿದ್ದಾರೆ. ನೆಲ್ಯಾಡಿ ಹೊರಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ನಿನ್ನೆ ಗಣಪತಿ ಕಟ್ಟೆಯಲ್ಲಿ ಸರಳ ಗಣೇಶೋತ್ಸವ ನಡೆದಿತ್ತು. ಗಣಪತಿ ವಿಗ್ರಹವನ್ನು ವಿಸರ್ಜನೆ ಮಾಡಿ ಗಣೇಶೋತ್ಸವ ಸಮಿತಿ ಸದಸ್ಯರು ತೆರಳಿದ್ದರು. ಇದಾದ ಬಳಿಕ ಈ ಕೃತ್ಯ ಎಸಗಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net