ಉಡುಪಿಯಲ್ಲಿ ಗ್ಯಾಸ್​ ಸಿಲಿಂಡರ್​ ಸ್ಫೋಟ: ಇಬ್ಬರು ಸಜೀವ ದಹನ, ಮೂವರ ಸ್ಥಿತಿ ಗಂಭೀರ

New Project(3)
Published on

ಉಡುಪಿ: ಕಾಪು ಮುಲ್ಲಾರು ಬಳಿ ಇಂದು(ಸೋಮವಾರ) ಬೆಳಗ್ಗೆ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಜೀವ ದಹನವಾಗಿದ್ದಾರೆ.

ರಜಾಕ್ ಮತ್ತು ರಜಬ್ ಮೃತ ದುರ್ದೈವಿಗಳು. ಗುಜರಿ ಅಂಗಡಿಯಲ್ಲಿದ್ದ ಮೂವರು ಪಾಲುದಾರರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಫೋಟದ ತೀವ್ರತೆಗೆ ಫ್ರಿಜ್ ಸಹಿತ ಗುಜರಿ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಬೆಂಕಿಯ ಕೆನ್ನಾಲಗೆ, ದಟ್ಟ ಹೊಗೆ ಮುಗಿಲೆತ್ತರಕ್ಕೆ ಆವರಿಸಿತ್ತು. ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದ್ದು, ಸ್ಥಳಕ್ಕೆ ದೌಡಾಯಿಸಿದ ಉಡುಪಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ. (ಇದಿಷ್ಟು ಪ್ರಾಥಮಿಕ ಮಾಹಿತಿ)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net