More

    ಹೆಣ್ಣು ಮಗು ಮನೆಯ ನಂದಾ ದೀಪ

    ಎನ್.ಆರ್.ಪುರ: ಹೆಣ್ಣು ಮಗು ಮನೆ ನಂದಾ ದೀಪವಾಗಿದ್ದು ಹೆಣ್ಣು ಮಗು ಹುಟ್ಟಿದಾಗ ಕುಟುಂಬದ ಸದಸ್ಯರು ಸಂಭ್ರಮ ಪಡಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ವಿಜಯಕುಮಾರ್ ಹೇಳಿದರು.
    ಗುರುವಾರ ಸರ್ಕಾರಿ ಆಸ್ಪತ್ರೆ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಹಾಗೂ ಪುಷ್ಪಾ ನಸಿರ್ಂಗ್ ಕಾಲೇಜಿನ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರತಿ ವಷರ್ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಗು ದಿನಾಚರಣೆ ಕಾರ್ಯಕ್ರಮ ಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಭೇಟಿ ಬಚಾವೋ ಭೇಟಿ ಪಡಾವೋ ಕಾರ್ಯಕ್ರಮದ ಯಶಸ್ಸಿನಿಂದ ಈ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.
    ಯಾವುದೇ ಕಾರಣಕ್ಕೂ ಭ್ರೂಣ ಲಿಂಗ ಪತ್ತೆ ಮಾಡಿ ಹತ್ಯೆ ಮಾಡಬಾರದು. ಹೆಣ್ಣು ಕುಟುಂಬದ ಕಣ್ಣಾಗಿದ್ದು ಅದನ್ನು ಪೋಷಿಸುವ ಹೊಣೆಗಾರಿಕೆ ಸಮಾಜದ ಎಲ್ಲರ ಮೇಲಿದೆ. ಲಿಂಗ ತಾರತಮ್ಯ ಹೋಗಲಾಡಿಸುವುದು, ಹೆಣ್ಣು ಮಕ್ಕಳ ಹಕ್ಕಿನ ಬಗ್ಗೆ ಅರಿವು ಮೂಡಿಸುವ ಗುರಿ ಹೊಂದಲಾಗಿದೆ. ಹೆಣ್ಣು ಮಗುವಿನ ರಕ್ಷಣೆಗಾಗಿ ಸರ್ಕಾರ ಗರ್ಭ ಪೂರ್ವ ಹಾಗೂ ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಶಾಸನ ಜಾರಿಗೊಳಿಸಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts