25.9 C
Bengaluru
Wednesday, January 22, 2020

12ವರ್ಷದ ಹಿಂದೆ ಕುಟುಂಬದಿಂದ ಬೇರ್ಪಟ್ಟಿದ್ದ ಬಾಲಕಿ ಮತ್ತೆ ಪಾಲಕರ ಮಡಿಲು ಸೇರಲು ಕಾರಣವಾಗಿದ್ದು ಫೇಸ್​ಬುಕ್​ !

Latest News

ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ...

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ವಿಜಯವಾಡ: 12 ವರ್ಷದ ಹಿಂದೆ ನಾಪತ್ತೆಯಾಗಿದ್ದ ಬಾಲಕಿಯೋರ್ವಳು ಈಗ ಕುಟುಂಬವನ್ನು ಸೇರಿಕೊಂಡಿದ್ದಾಳೆ. ಆದರೆ ಇದಕ್ಕೆ ಕಾರಣವಾಗಿದ್ದು ಫೇಸ್​​ಬುಕ್​ !

ಬಾಲಕಿಯ ಹೆಸರು ಭವಾನಿ. ಈಕೆ ವಂಶಿಕೃಷ್ಣ ಎಂಬುವರ ಮನೆಗೆ ಕೆಲಸ ಕೇಳಿಕೊಂಡು ಬಂದಿದ್ದಳು. ಈಗ ವಂಶಿಕೃಷ್ಣ ಅವರೇ ಬಾಲಕಿಯನ್ನು ಆಕೆಯ ತಂದೆ-ತಾಯಿ ಮಡಿಲಿಗೆ ಸೇರಿಸಿದ್ದಾರೆ.

ಭವಾನಿ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ಚಿಪುರುಪುಲ್ಲಿಯವಳು. ನಾಲ್ಕುವರ್ಷದವಳಾಗಿದ್ದಾಗ ತನ್ನ ತಂದೆ-ತಾಯಿಯಿಂದ ಹೇಗೋ ಬೇರೆಯಾಗಿದ್ದಳು. ಬಳಿಕ ವಿಜಯವಾಡದ ಮಹಿಳೆಯೋರ್ವರು ಬಾಲಕಿಯನ್ನು ದತ್ತು ತೆಗೆದುಕೊಂಡು ಸಾಕಿದ್ದರು. ಅಂದಿನಿಂದಲೂ ಆ ಮಹಿಳೆಯೊಂದಿಗೇ ವಾಸವಾಗಿದ್ದಳು.

ತಮ್ಮ ಮನೆ ಕೆಲಸಕ್ಕೆಂದು ಬಂದ ಭವಾನಿ ಬಳಿ ವಂಶಿ ಕೃಷ್ಣ ಆಕೆಯ ಬಗ್ಗೆ ಮಾಹಿತಿ ಕೇಳಿದರು. ತಾನು ತಂದೆ-ತಾಯಿಯಿಂದ ಬೇರ್ಪಟ್ಟಿದ್ದನ್ನು ಭವಾನಿ ಅವರಿಗೆ ತಿಳಿಸಿದರು. ಹೀಗೆ ಆಕೆಯ ಊರು, ಕುಟುಂಬದ ಬಗ್ಗೆ ಎಲ್ಲವನ್ನೂ ತಿಳಿದುಕೊಂಡ ವಂಶಿ ಫೇಸ್​ಬುಕ್​ನಲ್ಲಿ ಭವಾನಿಯ ಸಂಬಂಧಿಕರು, ಪಾಲಕರ ಬಗ್ಗೆ ಮಾಹಿತಿ ಸಿಗಬಹುದಾ ಎಂದು ಹುಡುಕತೊಡಗಿದರು.

ಹೀಗೆ ಹುಡುಕುತ್ತಿದ್ದಾಗ ಬಾಲಕಿ ಕೊಟ್ಟ ಮಾಹಿತಿ ಹೊಂದಾಣಿಕೆಯಾಗುವ ಒಂದಷ್ಟು ಜನರಿಗೆ ಮೆಸೇಜ್​ ಕೂಡ ಕಳಿಸಿದರು. ಅದರಲ್ಲಿ ಓರ್ವರು ನಾನು ಕಳಿಸಿದ ಸಂದೇಶಕ್ಕೆ ಪ್ರತಿಕ್ರಿಯೆ ಕಳಿಸಿದರು. ಅಲ್ಲದೆ ವಿಡಿಯೋ ಕಾಲ್​ ಮಾಡಲೂ ಕೇಳಿಕೊಂಡರು. ಹಾಗೆ ಕಾಲ್​ ಮಾಡಿದಾಗ ಈ ಬಾಲಕಿ ನಮ್ಮ ಕುಟುಂಬಕ್ಕೇ ಸೇರಿದವಳು ಎಂಬುದನ್ನು ಅವರು ತಿಳಿಸಿದರು. ಅಲ್ಲದೆ ಸಂತೋಷವನ್ನೂ ವ್ಯಕ್ತಪಡಿಸಿದರು ಎಂದು ವಂಶಿಕೃಷ್ಣ ಹೇಳಿದ್ದಾರೆ.

ಭವಾನಿ ಕೂಡ ತನ್ನ ಅಪ್ಪ-ಅಮ್ಮನನ್ನು ಸೇರುತ್ತಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿ ಹೋಗುವುದಾಗಿ ಹೇಳಿದಳು. ಆದರೆ ಆಕೆಯನ್ನು ಸಾಕಿದ್ದ ತಾಯಿ ಮೊದಲು ಒಪ್ಪಲಿಲ್ಲ. ಬೇಸರ ವ್ಯಕ್ತಪಡಿಸಿದರು. ಬಳಿಕ ಭವಾನಿಯ ನಿರ್ಧಾರಕ್ಕೆ ಸಮ್ಮತಿಸಿದರು ಎಂದು ತಿಳಿಸಿದ್ದಾರೆ. (ಏಜೆನ್ಸೀಸ್)

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...