ಮಹಾಕಾವ್ಯಗಳ ಅನಾವರಣಕ್ಕೆ ಉತ್ತಮ ಮಾಧ್ಯಮ

taala maddale
ಯಕ್ಷಗಾನ ತಾಳಮದ್ದಳೆಯನ್ನು ನಿವೃತ್ತ ಯೋಧ ಬೈಂದೂರು ಚಂದ್ರಶೇಖರ ನಾವಡ ಉದ್ಘಾಟಿಸಿದರು.
Published on

ಬೈಂದೂರು: ಯಕ್ಷಗಾನ ಕಲೆ ಕರ್ನಾಟಕದ ಕೆಲವೇ ಜಿಲ್ಲೆಗಳಿಗೆ ಸೀಮಿತವಾದುದು. ವಿದ್ಯುನ್ಮಾನ ಮಾಧ್ಯಮಗಳಿಂದಾಗಿ ಯಕ್ಷಗಾನ ಜನರಿಂದ ದೂರವಾಗುತ್ತಿದೆ ಎಂದು ಕೆಲವರು ದೂರುತ್ತಾರೆ. ಆದರೆ ಹಿಮ್ಮೇಳ ಮತ್ತು ಅರ್ಥದಾರಿಗಳು ಮಾತ್ರ ಸಾಕಾಗುವ ಅತ್ಯಂತ ಸರಳ ರಂಗಭೂಮಿಯಾದ ತಾಳಮದ್ದಳೆಗೂ ದೊಡ್ಡ ಶ್ರೋತೃವರ್ಗ ಇರುವುದು ಜೀವಂತ ಕಲೆ ನಶಿಸದು ಎಂಬ ಭರವಸೆ ನೀಡುತ್ತದೆ ಎಂದು ನಿವೃತ್ತ ಯೋಧ ಬೈಂದೂರು ಚಂದ್ರಶೇಖರ ನಾವಡ ಹೇಳಿದರು.

ಲಾವಣ್ಯ ಬೈಂದೂರು, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘ ಸಂಯುಕ್ತ ಆಶ್ರಯದಲ್ಲಿ ಯಕ್ಷಗಾನ ತಾಳಮದ್ದಳೆ ಉದ್ಘಾಟಿಸಿ ಮಾತನಾಡಿದರು. ಯಕ್ಷಗಾನ, ತಾಳಮದ್ದಳೆ, ಹೋವಿನಕೋಲು ಮುಂತಾದವುಗಳು ನಮ್ಮ ಪರಂಪರೆಯ ಭಾಗವಾಗಿದ್ದು, ಮಹಾ ಕಾವ್ಯಗಳನ್ನು ಜನರಿಗೆ ತಲುಪಿಸುವ ಉತ್ತಮ ಮಾಧ್ಯಮವಾಗಿದೆ ಎಂದರು.

ಲಾವಣ್ಯದ ಅಧ್ಯಕ್ಷ ನರಸಿಂಹ ಬಿ.ನಾಯಕ್, ಹಿರಿಯ ರಂಗ ಕಲಾವಿದ ಬಿ.ಗಣೇಶ ಕಾರಂತ್, ವೃತ್ತ ನಿರೀಕ್ಷಕ ಸವಿತ್ರತೇಜ, ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸುಧಾಕರ ಯಡ್ತರೆ, ಕಾರ್ಯದರ್ಶಿ ಚಂದ್ರ ಯಡ್ತರೆ, ಅಂಬೇಡ್ಕರ್ ಸಂಘದ ಅಧ್ಯಕ್ಷ ರಾಘವೇಂದ್ರ ಬಿ. ಕೆ.ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ಕಲಾವಿದರಿಂದ ಅಂಗದ ಸಂಧಾನ ಹಾಗೂ ಮಾಗಧ ವಧೆ ಯಕ್ಷಗಾನ ತಾಳಮದ್ದಳೆ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net