More

    ಸಾರಿಗೆ ಸಿಬ್ಬಂದಿಗೆ ಸಿಹಿಸುದ್ದಿ! ಕೆಲಸದಿಂದ ವಜಾಗೊಂಡಿದ್ದವರಿಗೆ ಇನ್ನೊಂದು ತಿಂಗಳಲ್ಲಿ ಮರು ನೇಮಕ

    ಗದಗ: ಕರ್ನಾಟಕ ಸಾರಿಗೆ ಸಿಬ್ಬಂದಿಗೆ ಸಚಿವ ಬಿ. ಶ್ರೀರಾಮುಲು ಸಿಹಿ ಸುದ್ದಿ ಕೊಟ್ಟಿದ್ದಾರೆ. ಮುಷ್ಕರದಲ್ಲಿ ಪಾಲ್ಗೊಂಡು ಕೆಲಸದಿಂದ ವಜಾಗೊಂಡಿದ್ದ ಸಿಬ್ಬಂದಿಯನ್ನು ಇನ್ನೊಂದು ತಿಂಗಳಲ್ಲಿ ಮರು ನಿಯುಕ್ತಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.

    ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶ್ರೀರಾಮುಲು, ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ 8 ತಿಂಗಳ ಹಿಂದೆ ಕರ್ತವ್ಯಕ್ಕೆ ಹಾಜರಾಗದೆ ಮುಷ್ಕರದಲ್ಲಿ ಪಾಲ್ಗೊಂಡಿದ್ದ ಸಾರಿಗೆ ಸಂಸ್ಥೆಯ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು. ಆದರೆ, ಮಾನವೀಯತೆ ಹಾಗೂ ಅವರ ಕುಟುಂಬದವರ ಹಿತದೃಷ್ಟಿಯಿಂದ ವಜಾಗೊಂಡಿರುವ ಸಿಬ್ಬಂದಿಯನ್ನು ನಾಲ್ಕು ವಾರದೊಳಗೆ ಸೇವೆಗೆ ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ ಎಂದರು.

    ಮರು ನಿಯುಕ್ತಿ ಹಿನ್ನೆಲೆಯಲ್ಲಿ ಈಗಾಗಲೇ ನಾಲ್ಕು ಸಾರಿಗೆ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. ಅಲ್ಲದೆ, ವಜಾಗೊಂಡಿರುವ ಸಿಬ್ಬಂದಿ ಕೋರ್ಟ್​ ಮೆಟ್ಟಿಲೇರಿರುವ ಕಾರಣ ಕೆಲ ಕಾನೂನಿನ ತೊಡಕು ಉಂಟಾಗಿದೆ. ಹೀಗಾಗಿ ಲೋಕ ಅದಾಲತ್​ ಮೂಲಕ ಎಲ್ಲ ಪ್ರಕರಣಗಳನ್ನು ಇತ್ಯರ್ಥ ಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದ ಶ್ರೀರಾಮುಲು, ಇನ್ಮುಂದೆ ಸಿಬ್ಬಂದಿ ಇಂತಹ ಹೋರಾಟಗಳಲ್ಲಿ ಪಾಲ್ಗೊಳ್ಳಬಾರದು. ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು ಎಂದು ಸಲಹೆ ನೀಡಿದರು.

    ಹೊಲದಲ್ಲಿ ಮಗುವನ್ನ ಎಸೆದು ಹೋದ ಕಟುಕರು: ರಾತ್ರಿಯಿಡೀ ಕಾವಲು ಕಾದು ಮಗುವಿನ ಪ್ರಾಣ ಉಳಿಸಿದ ಬೀದಿನಾಯಿ!

    ಇನ್ನೇನು ಶಾಲೆ ಒಳಗೆ ಹೋಗಬೇಕು ಅನ್ನುವಷ್ಟರಲ್ಲಿ ಬಾಲಕನ ಪ್ರಾಣ ಹೊತ್ತೊಯ್ದ ಜವರಾಯ!

    ಮಗಳೇ ನೀನಿನ್ನೂ ಚಿಕ್ಕವಳು, ಬೇಡ ಕಣವ್ವಾ ಅಂದ್ರೂ ಕೇಳಲಿಲ್ಲ… ಬಾಳಿ ಬದುಕಬೇಕಿದ್ದವರ ಬಾಳಲ್ಲಿ ನಡೆಯಿತು ಘೋರ ದುರಂತ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts