More

    53 ವಿದ್ಯಾರ್ಥಿಗಳಿದ್ದ ಸರ್ಕಾರಿ ಬಸ್ ಪಲ್ಟಿ, ಮೂವರು ಮಕ್ಕಳು ಹುಬ್ಬಳ್ಳಿ ಕಿಮ್ಸ್​ಗೆ ದಾಖಲು

    ಸವಣೂರ: ಶಿಗ್ಗಾಂವಿ ತಾಲೂಕು ಗೊಟಗೋಡಿಯ ಉತ್ಸವ ರಾಕ್ ಗಾರ್ಡನ್​ಗೆ ಒಂದು ದಿನದ ಪ್ರವಾಸಕ್ಕೆ ಆಗಮಿಸುತ್ತಿದ್ದ ಶಾಲಾ ವಿದ್ಯಾರ್ಥಿಗಳಿದ್ದ ಕೆಎಸ್​ಆರ್​ಟಿಸಿ ಬಸ್, ಚಾಲಕನ ಅಜಾಗರೂಕತೆಯಿಂದ ಪಲ್ಟಿಯಾಗಿ ಮೂವರು ಮಕ್ಕಳು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡು, 24 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ತಾಲೂಕಿನ ಬೇವಿನಹಳ್ಳಿ ಗ್ರಾಮದ ಹತ್ತಿರ ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಗಿನ ಜಾವ ಸಂಭವಿಸಿದೆ.

    ರಾಯಚೂರು ಜಿಲ್ಲೆಯ ಲಿಂಗಸುಗೂರ ತಾಲೂಕಿನ ಸಜ್ಜಲಗುಡ್ಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 53 ವಿದ್ಯಾರ್ಥಿಗಳು 6 ಶಿಕ್ಷಕರೊಂದಿಗೆ ಸೋಮವಾರ ರಾತ್ರಿ ಪ್ರವಾಸ ಹೊರಟಿದ್ದರು. ಮಂಗಳವಾರ ಬೆಳಗಿನ ಜಾವ 4.15ರ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ಹೆದ್ದಾರಿ ಪಕ್ಕದ ಕಾಲುವೆಗೆ ಉರುಳಿದೆ.

    ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಚಾಲಕ ಮಲ್ಲಪ್ಪ, ವಿದ್ಯಾರ್ಥಿಗಳಾದ ಸವಿತಾ ಅಮರೆಗೌಡ್ರ, ವಿದ್ಯಾಶ್ರೀ ಶಾನಗೌಡ್ರ, ಗುರುಪ್ರಸಾದ ಮಾವಿನಬಾವಿ ಅವರಿಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್​ಗೆ ಕಳುಹಿಸಲಾಗಿದೆ. 26 ವಿದ್ಯಾರ್ಥಿಗಳಿಗೆ ಪಟ್ಟಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಘಟನಾ ಸ್ಥಳಕ್ಕೆ ಬಿಇಒ ಎಂ. ಎಫ್. ರ್ಬಾ, ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಶಿಕ್ಷಕರು ಭೇಟಿ ನೀಡಿ, ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ್ದಾರೆ. ಮಕ್ಕಳ ಪಾಲಕರೊಂದಿಗೆ ಸಂರ್ಪಸಿ ಸಾಂತ್ವನ ಹೇಳಿದ್ದಾರೆ.

    ಬಿಜೆಪಿ ಮಂಡಳ ಅಧ್ಯಕ್ಷ ಗಂಗಾಧರ ಬಾಣದ ಹಾಗೂ ಇತರರು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳಿಗೆ ಧೈರ್ಯ ಹೇಳಿದರು.

    ಉಪ ವಿಭಾಗಾಧಿಕಾರಿ ಮೊಹಮ್ಮದ ಖಿಜರ್, ತಹಸೀಲ್ದಾರ್ ಭರತರಾಜ್ ಕೆ.ಎನ್., ಎಸ್​ಪಿ ಅಂಶು ಕುಮಾರ, ಡಿಎಸ್​ಪಿ ಎಂ.ಎಸ್. ಪಾಟೀಲ, ಸಿಪಿಐ ಆನಂದ ಒನಕುದ್ರೆ ಸೇರಿ ಸಾರಿಗೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.

    ವಿದ್ಯಾರ್ಥಿಯ ಸಾಹಸಕ್ಕೆ ಮೆಚ್ಚುಗೆ

    ಅಪಘಾತಕ್ಕೆ ಈಡಾದ ಬಸ್​ನಲ್ಲಿದ್ದ ವಿದ್ಯಾರ್ಥಿ ಮಲ್ಲನಗೌಡ ಚಳಗೇರಿ, ಬಸ್ ವಿದ್ಯುತ್ ಕಂಬಕ್ಕೆ ತಾಗಿರುವುದನ್ನು ಕಂಡು ಕೂಡಲೇ ತುರ್ತು ನಿರ್ಗಮನದ ಮೂಲಕ ಹೊರ ಬಂದು, ಇತರ ವಿದ್ಯಾರ್ಥಿಗಳನ್ನು ತಕ್ಷಣ ಹೊರಕ್ಕೆ ತರುವಲ್ಲಿ ಶ್ರಮಿಸಿದ್ದಾನೆ. ವಿದ್ಯಾರ್ಥಿಯ ಸಾಹಸಕ್ಕೆ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts