More

    ಜನರ- ಜನಪ್ರತಿನಿಧಿಗಳ ದೂರವಾಣಿ ಕರೆ ಸ್ವೀಕರಿಸದ ಸರ್ಕಾರಿ ಅಧಿಕಾರಿಗಳಿಗೆ ಕಾದಿದೆ ಆಪತ್ತು

    ಬೆಂಗಳೂರು: ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳ ದೂರವಾಣಿ ಕರೆ ಸ್ವೀಕರಿಸದ ಹಾಗೂ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳಿಗೆ ಕಂದಾಯ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ.

    ಕಂದಾಯ ಇಲಾಖೆ ಅಧೀನದಲ್ಲಿ ಕಾರ್ಯನಿರ್ವಹಿಸುವ ಗ್ರಾಮ ಲೆಕ್ಕಾಧಿಕಾರಿಗಳು, ರಾಜಸ್ವ ನಿರೀಕ್ಷಕರು, ಉಪ ತಹಸೀಲ್ದಾರರು, ತಹಸೀಲ್ದಾರರು, ಉಪ ವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ನೇರವಾಗಿ ಜನಪ್ರತಿನಿಧಿಗಳು, ಜನರ ಸಂಪರ್ಕದಲ್ಲಿರಬೇಕಾಗುತ್ತದೆ. ಮುಖ್ಯವಾಗಿ ಜನರ ಅಹವಾಲುಗಳನ್ನು ಇತ್ಯರ್ಥಪಡಿಸುವ ಪ್ರಥಮ ಹಂತದಲ್ಲಿನ ಪ್ರಮುಖ ಕಾರ್ಯ ತಹಸೀಲ್ದಾರ್​ ಅವರದ್ದಾಗಿರುತ್ತದೆ. ಆದರೆ, ಸಾರ್ವಜನಿಕರು ಹಾಗೂ ಜನ ಪ್ರತಿನಿಧಿಗಳ ದೂರವಾಣಿ ಕರೆಗಳನ್ನು ತಹಸೀಲ್ದಾರರು ಸ್ವೀಕರಿಸದಿರುವ ವಿಷಯ ಸರ್ಕಾರದ ಗಮನಕ್ಕೆ ಬಂದಿದೆ. ಇತಂಹ ನಡೆಯನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಖಡಕ್ ಎಚ್ಚರಿಕೆ ಕೊಟ್ಟಿದೆ.

    ಇನ್ನು ಮುಂದೆ ಜನಪ್ರತಿನಿಧಿ ಅಥವಾ ಸಾರ್ವಜನಿಕರಿಂದ ಕರೆ ಬಂದಲ್ಲಿ ಸ್ವೀಕರಿಸಿ ಅಹವಾಲು, ಮನವಿಗಳಿಗೆ ಹೆಚ್ಚು ಗಮನ ನೀಡಿ ಕಾನೂನಿನ ವ್ಯಾಪ್ತಿಯಲ್ಲಿ ನಿಯಮಾನುಸಾರ ಕ್ರಮಕೈಗೊಳ್ಳಬೇಕು. ಒಂದು ವೇಳೆ ಕರೆ ಸ್ವೀಕರಿಸದೇ ಹೋದಲ್ಲಿ ಸಾರ್ವಜನಿಕರಿಗೆ ತಲುಪಿಸುವ ಸೇವೆಗಳಲ್ಲಿ ಏರುಪೇರು ಉಂಟಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಕರೆ ಸಕಾಲದಲ್ಲಿ ಸ್ವೀಕರಿಸಲು ಸಾಧ್ಯವಾಗದೇ ಹೋದಲ್ಲಿ ತಪ್ಪಿದ ಕರೆಗಳಿಗೆ ಮರು ಕರೆ ಮಾಡಿ ಕೋರಿಕೆ, ಮನವಿಗಳನ್ನು ಆಲಿಸಬೇಕು ಎಂದು ಸ್ಪಷ್ಟವಾಗಿ ಸೂಚಿಸಲಾಗಿದೆ.

    ಕರೆ ಸ್ವೀಕರಿಸದೆ ಜನಪ್ರತಿನಿಧಿಗಳಿಗೆ ಅಗೌರವ ತೋರುವುದು ಕಂಡುಬಂದಲ್ಲಿ ನಿಯಮಾನುಸಾರ ಸೂಕ್ತಕ್ರಮ ಕೈಗೊಳ್ಳಲಾಗುವುದು ಹಾಗೂ ಹಕ್ಕು ಚ್ಯುತಿ ಉಂಟಾಗುವ ಸಾಧ್ಯತೆ ಇರುವುದರಿಂದ ಇದಕ್ಕೆ ಅವಕಾಶ ನೀಡದಂತೆ ಕರೆ ಸ್ವೀಕರಿಸಿ ಅಪೇಕ್ಷಿತ ಮಾಹಿತಿ ನೀಡಿ ಕಾನೂನು ವ್ಯಾಪ್ತಿಯಲ್ಲಿ ನಿಯಮಾನುಸಾರ ಆದ್ಯತೆ ಮೇರೆಗೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

    ತರಕಾರಿ ಖರೀದಿಗೆ ಬಂದ ಟೆಕ್ಕಿಯನ್ನ ಡೇಟಿಂಗ್‌ಗೆಂದು ಮನೆಗೆ ಕರೆದೊಯ್ದ ಯುವತಿ! ಮುಂದೆ ಆಗಿದ್ದೆಲ್ಲವೂ ದುರಂತ

    ಸೋಲದೇವನಹಳ್ಳಿಯ ನಾಲ್ವರು ಮಕ್ಕಳು ಪತ್ತೆ: ಪೊಲೀಸರ ಬಳಿ ಮನದ ನೋವನ್ನ ಎಳೆಎಳೆಯಾಗಿ ಬಿಚ್ಚಿಟ್ಟ ಮಕ್ಕಳು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts