ಜನರ- ಜನಪ್ರತಿನಿಧಿಗಳ ದೂರವಾಣಿ ಕರೆ ಸ್ವೀಕರಿಸದ ಸರ್ಕಾರಿ ಅಧಿಕಾರಿಗಳಿಗೆ ಕಾದಿದೆ ಆಪತ್ತು

ಬೆಂಗಳೂರು: ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳ ದೂರವಾಣಿ ಕರೆ ಸ್ವೀಕರಿಸದ ಹಾಗೂ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳಿಗೆ ಕಂದಾಯ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ. ಕಂದಾಯ ಇಲಾಖೆ ಅಧೀನದಲ್ಲಿ ಕಾರ್ಯನಿರ್ವಹಿಸುವ ಗ್ರಾಮ ಲೆಕ್ಕಾಧಿಕಾರಿಗಳು, ರಾಜಸ್ವ ನಿರೀಕ್ಷಕರು, ಉಪ ತಹಸೀಲ್ದಾರರು, ತಹಸೀಲ್ದಾರರು, ಉಪ ವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ನೇರವಾಗಿ ಜನಪ್ರತಿನಿಧಿಗಳು, ಜನರ ಸಂಪರ್ಕದಲ್ಲಿರಬೇಕಾಗುತ್ತದೆ. ಮುಖ್ಯವಾಗಿ ಜನರ ಅಹವಾಲುಗಳನ್ನು ಇತ್ಯರ್ಥಪಡಿಸುವ ಪ್ರಥಮ ಹಂತದಲ್ಲಿನ ಪ್ರಮುಖ ಕಾರ್ಯ ತಹಸೀಲ್ದಾರ್​ ಅವರದ್ದಾಗಿರುತ್ತದೆ. ಆದರೆ, ಸಾರ್ವಜನಿಕರು ಹಾಗೂ ಜನ ಪ್ರತಿನಿಧಿಗಳ ದೂರವಾಣಿ ಕರೆಗಳನ್ನು ತಹಸೀಲ್ದಾರರು ಸ್ವೀಕರಿಸದಿರುವ ವಿಷಯ … Continue reading ಜನರ- ಜನಪ್ರತಿನಿಧಿಗಳ ದೂರವಾಣಿ ಕರೆ ಸ್ವೀಕರಿಸದ ಸರ್ಕಾರಿ ಅಧಿಕಾರಿಗಳಿಗೆ ಕಾದಿದೆ ಆಪತ್ತು