More

  ಶೈಕ್ಷಣಿಕ ವರ್ಷಾರಂಭಕ್ಕೆ ತೆರೆದ ಜೀಪ್‌ನಲ್ಲಿ ಭವ್ಯ ಮೆರವಣಿಗೆ

  ಕಾರ್ಕಳ: 2024-25ನೇ ಸಾಲಿನ ಶೈಕ್ಷಣಿಕ ವರ್ಷಾರಂಭ ಮುಂಡ್ಕೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
  ಒಂದನೇ ತರಗತಿಗೆ ನೂತನ ದಾಖಲಾತಿ ಪಡೆದ ಹಾಗೂ ಇತರ ವಿದ್ಯಾರ್ಥಿಗಳನ್ನು ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಿಂದ ಶಾಲೆವರೆಗೆ ತೆರೆದ ಜೀಪ್‌ನ ಭವ್ಯ ಮೆರವಣಿಗೆಯಲ್ಲಿ ಶಾಲೆಗೆ ಕರೆತರಲಾಯಿತು.

  ಮುಂಡ್ಕೂರು ಗ್ರಾಪಂ ಅಧ್ಯಕ್ಷ ದೇವಪ್ಪ ಸಪಳಿಗ ಅಧ್ಯಕ್ಷತೆಯಲ್ಲಿ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಲಾಯಿತು. ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೋರಿಬೆಟ್ಟುಗುತ್ತು ಸುರೇಂದ್ರ ಶೆಟ್ಟಿ, ನಿವೃತ್ತ ಕಂದಾಯ ಅಧಿಕಾರಿ ಅವಿಲ್ ಡಿಸೋಜ, ಪಿಡಿಒ ಸತೀಶ್, ನಿವೃತ್ತ ಮುಖ್ಯಶಿಕ್ಷಕ ಗಣನಾಥ ಶೆಟ್ಟಿ, ನಿವೃತ್ತ ಶಿಕ್ಷಕ ಮೋಹನ್‌ದಾಸ್ ಶೆಟ್ಟಿ, ನಮ್ಮ ಫ್ರೆಂಡ್ಸ್‌ನ ಆನಂದ ಸಾಲ್ಯಾನ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಉಮಾಧರ ಆಚಾರ್ಯ, ಕಾರ್ಕಳ ತಾಲೂಕು ಕಸಾಪ ಆಧ್ಯಕ್ಷ ಪ್ರಭಾಕರ ಶೆಟ್ಟಿ, ಮುಖ್ಯ ಶಿಕ್ಷಕ ರಂಗಸ್ವಾಮಿ, ಸಹ ಶಿಕ್ಷಕರಿದ್ದರು. ಹಿಲ್ಡಾ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.

  See also  ಕಾರ್ಕಳದಲ್ಲಿ ಜಲ ತತ್ವಾರ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts