ಕನ್ನಡ ರಥಕ್ಕೆ ಬೆಳ್ತಂಗಡಿಯಲ್ಲಿ ಅದ್ದೂರಿ ಸ್ವಾಗತ

Bel_Kannada Ratha
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಮಂಡ್ಯದಲ್ಲಿ ಡಿ. 20ರಿಂದ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಅರಿವು ಮೂಡಿಸುವ ದೃಷ್ಟಿಯಿಂದ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥ ನ.8ರಂದು ಬೆಳ್ತಂಗಡಿ ತಾಲೂಕಿಗೆ ಆಗಮಿಸಿದಾಗ ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ಘಟಕದ ನೇತೃತ್ವದಲ್ಲಿ ಭವ್ಯವಾಗಿ ಸ್ವಾಗತಿಸಲಾಯಿತು.

ಬೆಳ್ತಂಗಡಿ ಶ್ರೀ ಅಯ್ಯಪ್ಪ ಮಂದಿರದ ಬಳಿಯಿಂದ ಬಸ್ ನಿಲ್ದಾಣದವರಗೆ ರಥವನ್ನು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ. ಎಂ.ಪಿ ಶ್ರೀನಾಥ್ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ ವಾಣಿ ಕಾಲೇಜಿನ ಪ್ರಾಚಾರ್ಯ ಡಿ. ಯದುಪತಿ ಗೌಡ ನೇತೃತ್ವದಲ್ಲಿ ಘಟಕದ ಪದಾಧಿಕಾರಿಗಳು, ಕನ್ನಡ ಅಭಿಮಾನಿಗಳು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿ ಮೆರವಣಿಗೆ ಮೂಲಕ ಬಸ್ ನಿಲ್ದಾಣದವರೆಗೆ ಕರೆತಂದರು.

ಬಸ್ ನಿಲ್ದಾಣದ ಬಳಿ ತೆಂಗಿನಕಾಯಿ ಒಡೆದು, ಕನ್ನಡ ಮಾತೆಗೆ ಹೂ ಹಾರ ಹಾಗೂ ಪುಷ್ಪಾರ್ಚನೆಯನ್ನು ತಾಲೂಕು ತಹಶೀಲ್ದಾರ್ ಪೃಥ್ವಿಸಾನಿಕಂ ನೆರವೇರಿಸಿದರು. ನಿವೃತ್ತ ಪ್ರಾಂಶುಪಾಲ ಎ. ಕೃಷ್ಣಪ್ಪ ಪೂಜಾರಿ ಕನ್ನಡ, ಭಾಷೆ, ನಾಡು-ನುಡಿಯ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ ಎಂದರು.

ತಾಲೂಕು ಘಟಕದ ಅಧ್ಯಕ್ಷ ಡಿ.ಯದುಪತಿ ಗೌಡ ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು. ಗೃಹರಕ್ಷಕ ದಳ ತಾಲೂಕು ಘಟಕಾಧಿಕಾರಿ ಜಯಾನಂದ ಲಾಯಿಲ, ತಾ.ಪಂ ವ್ಯವಸ್ಥಾಪಕ ಪ್ರಶಾಂತ್ ಡಿ.ಬಳಂಜ, ನ.ಪಂ ಮುಖ್ಯಾಧಿಕಾರಿ ರಾಜೇಶ್, ಕಂದಾಯ ನಿರೀಕ್ಷಕ ಪ್ರತೀಶ್, ಪಾವಡಪ್ಪ, ಸಮಾಜ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ಧನಂಜಯ, ನ.ಪಂ ಹಿರಿಯ ಸದಸ್ಯ ಜಗದೀಶ್ ಡಿ., ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net