ಶೋಷಿತ ಸಮುದಾಯಕ್ಕೆ ಮಾಡಿದ ಮಹಾ ಮೋಸ

Sunil Kumar
Published on

ಕಾರ್ಕಳ: ರಾಜ್ಯ ಸರ್ಕಾರ ತಯಾರಿಸಿದ ಜಾತಿ ಗಣತಿ ವರದಿಯನ್ನು ಖುದ್ದು ಕಾಂಗ್ರೆಸ್ ಹೈಕವಾಂಡ್ ಕಿತ್ತು ಬಿಸಾಕಿದೆ. 150 ಕೋಟಿ ರೂ. ವೆಚ್ಚ ವಾಡಿ ತಯಾರಿಸಿದ ಈ ವರದಿ ರಾಜ್ಯದ ತೆರಿಗೆದಾರರಿಗೆ ವಾಡಿದ ಮಹಾಮೋಸದ ಜತೆಗೆ ಹಿಂದುಳಿದ ಹಾಗೂ ಶೋಷಿತ ಸಮುದಾಯಕ್ಕೆ ವಾಡಿದ ಮೋಸ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ.

ಜಾತಿ ಗಣತಿ ವರದಿ ದತ್ತಾಂಶದಲ್ಲಿ ಲೋಪವಿದೆ, ಇದನ್ನು ಪುನಃ ಪರಿಶೀಲಿಸಬೇಕು ಎಂದು ಬಿಜೆಪಿ ಆಗ್ರಹಿಸಿತ್ತು. ಆದರೆ ಸಿದ್ದರಾಮಯ್ಯ ಇಂಥ ಸೂಕ್ಷ್ಮ ವಿಚಾರದಲ್ಲೂ ತಮ್ಮ ಎಂದಿನ ಉಡಾಫೆ ಮುಂದುವರಿಸಿದ್ದರು. ಸಚಿವ ಸಂಪುಟ ಸಭೆಯಲ್ಲಿ ವರದಿ ಮಂಡಿಸಿದ್ದರು. ನಂದಿಬೆಟ್ಟದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿ ಸ್ವೀಕರಿಸುವುದಕ್ಕೂ ಮುಂದಾಗಿದ್ದರು. ಆದರೆ ಈ ವರದಿ ದತ್ತಾಂಶ ಸರಿಯಿಲ್ಲ, ಕಾಲಮಿತಿಯಲ್ಲಿ ಮರು ಗಣತಿ ವಾಡಿ ಎಂದು ಕಾಂಗ್ರೆಸ್ ಹೈಕವಾಂಡ್ ಹೇಳಿದೆ. ಸಿದ್ದರಾಮಯ್ಯ ಮಾತ್ರವಲ್ಲ ಕಾಂಗ್ರೆಸ್ ಹೈಕವಾಂಡ್ ಕೂಡಾ ರಾಜ್ಯದ ಹಿಂದುಳಿದ ವರ್ಗ, ಶೋಷಿತ ಸಮುದಾಯದ ಭಾವನೆಗಳಿಗೆ ನೋವುಂಟು ವಾಡಿದೆ. ಕಳೆದ ಹತ್ತು ವರ್ಷಗಳಿಂದ ಸಿದ್ದರಾಮಯ್ಯ ಇದೇ ವಿಚಾರ ಇಟ್ಟುಕೊಂಡು ರಾಜ್ಯದ ಜನರನ್ನು ಮೂರ್ಖರನ್ನಾಗಿಸುವ ಜತೆಗೆ ಸಮುದಾಯಗಳ ಮಧ್ಯೆ ಅಸಮಾಧಾನ ಸೃಷ್ಟಿಸಿದ್ದರು ಎಂದು ಶಾಸಕ ವಿ.ಸುನಿಲ್‌ಕುವಾರ್ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net