More

    ಇಂಡಿಯಾ ಒಕ್ಕೂಟಕ್ಕೆ ಬಹಮತ ಕನಸಿನ ಮಾತು

    ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಬಹಮತ ಪಡೆಯುವುದು ಕನಸಿನ ಮಾತು. ದೇಶದ ಚರಿತ್ರೆಯಲ್ಲೇ ಅದು ಅಸಾಧ್ಯ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.

    ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಅನ್ನುತ್ತಿದ್ದಾರೆ. ರಾಜ್ಯದಲ್ಲಿ 135 ಸೀಟುಗಳನ್ನು ಗೆದ್ದಾಗಲೇ ಖರ್ಗೆ ಅವರನ್ನು ಸಿಎಂ ಮಾಡಬಹುದಿತ್ತು. ಆದರೆ ಅವರನ್ನು ಸಿಎಂ ಮಾಡಲೇ ಇಲ್ಲ. ಇದೀಗ ಪ್ರಧಾನಿ ಮಾಡುತ್ತಾರಾ ಎಂದು ಪ್ರಶ್ನಿಸಿದರು.
    ಖರ್ಗೆ ಪ್ರಧಾನಿ ಅಭ್ಯರ್ಥಿ ಎಂದು ಕಾಂಗ್ರೆಸ್ ಘೋಷಿಸಲಿಲ್ಲ. ಮೈತ್ರಿಕೂಟದ ಅರವಿಂದ ಕೇಜ್ರಿವಾಲ್ ಮತ್ತು ಮಮತಾ ಬ್ಯಾನರ್ಜಿ ಅವರು ಖರ್ಗೆ ಹೆಸರು ಪ್ರಸ್ತಾಪಿಸಿದ್ದರೂ ಎಐಸಿಸಿ ನಾಯಕರಾದ ಸೋನಿಯಾ ಗಾಂಧಿ ಆಗಲಿ, ರಾಹುಲ್ ಗಾಂಧಿ ಆಗಲಿ ಬಾಯಿ ಬಿಚ್ಚಲಿಲ್ಲ. ಬೇರೆ ಪಕ್ಷದವರು ನೀಡಿದ ಹೇಳಿಕೆಗೆ ಕನಿಷ್ಠಪಕ್ಷ ಸ್ವಾಗತವನ್ನೂ ಅವರು ಮಾಡಲಿಲ್ಲ. ಸ್ವತಃ ಖರ್ಗೆ ಅವರಗೇ ನಂಬಿಕೆ ಇಲ್ಲ ಎಂದು ಟೀಕಿಸಿದರು.
    ಲೋಕಸಭೆ ಚುನಾವಣೆಯನ್ನು ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಎದುರಿಸಲು ಸಜ್ಜಾಗಿರುವುದು ಆಶಾದಾಯಕ ಬೆಳೆವಣಿಗೆ. ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ರಾಜ್ಯ ಪ್ರವಾಸ ಮಾಡಿ ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡಲು ಶ್ರಮಿಸುವುದಾಗಿ ಹೇಳಿದ್ದಾರೆ. ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ವಿ.ವೈ.ವಿಜಯೇಂದ್ರ ಕೂಡ ಎಲ್ಲ ಹಿರಿಯರ ಸಲಹೆ, ಸಹಕಾರ ಪಡೆದು ಮೈತ್ರಿಕೂಟವು 28 ಸ್ಥಾನ ಗೆಲ್ಲುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದರು. ಬಿಜೆಪಿ ಮಾಧ್ಯಮ ಪ್ರಮುಖ್ ಕೆ.ವಿ.ಅಣ್ಣಪ್ಪ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts