

ಕೋಟ: ಅಂಬೇಡ್ಕರ್ ಸ್ವಾತಂತ್ರ್ಯ, ಸಮಾನತೆ ಮತ್ತು ಸೋದರತ್ವ ತತ್ವಗಳ ಆಧಾರದ ಮೇಲೆ ಶೋಷಿತ ಸಮುದಾಯಗಳ ಪರ ಹೋರಾಡಿದ ಮಹಾನ್ ನಾಯಕ ಎಂದು ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಎ.ಕುಂದರ್ ಹೇಳಿದರು.
ಕೋಟ ಬ್ಲಾಕ್ ಕಾಂಗ್ರೆಸ್ ಕಚೇರಿಯ ಇಂದಿರಾ ಭವನದಲ್ಲಿ ಸೋಮವಾರ ನಡೆದ ಅಂಬೇಡ್ಕರ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು.
ಕಾಂಗ್ರೆಸ್ ವಕ್ತಾರ ವಿನಯ ಕುಮಾರ ಕಬ್ಯಾಡಿ ಮಾತನಾಡಿದರು. ಪಾಂಡೇಶ್ವರ ಗ್ರಾ.ಪಂ. ಸದಸ್ಯ ಚಂದ್ರಮೋಹನ್ ಪೂಜಾರಿ, ಬ್ಲಾಕ್ ಕಾಂಗ್ರೆಸ್ ಹಿಂದುಳಿದ ಘಟಕ ಅಧ್ಯಕ್ಷ ದಿನೇಶ್ ಬಂಗೇರ, ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ನಜೀರ್, ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಜೇಶ್ ಕೆ., ಬ್ಲಾಕ್ ಕಾಂಗ್ರೆಸ್ ಇಂಟಕ್ ಅಧ್ಯಕ್ಷ ದೇವೇಂದ್ರ ಗಾಣಿಗ, ಬ್ಲಾಕ್ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಅಧ್ಯಕ್ಷ ಶ್ರೀಕಾಂತ್ ಆಚಾರ್, ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಘಟಕ ಅಧ್ಯಕ್ಷ ಶ್ರೀನಿವಾಸ್ ಶೆಟ್ಟಿಗಾರ್, ಗಣೇಶ್ ಕೆ., ಪ್ರಮುಖರಾದ ಬಸವ ಪೂಜಾರಿ, ರತ್ನಾಕರ್ ಶ್ರೀಯಾನ್, ಸೂರ್ಯಕಾಂತ್ ಶೆಟ್ಟಿ, ಸತೀಶ್ ಪೂಜಾರಿ, ರಾಜು ಪೂಜಾರಿ, ಅಶೋಕ್ ಬಡಹೋಳಿ, ರಘು ಭಂಡಾರಿ, ಯಾಶಿನ್, ಜಗನಾಥ್ ಪೂಜಾರಿ ಉಪಸ್ಥಿತರಿದ್ದರು.
ಕಾಂಗ್ರೆಸ್ ಮುಖಂಡ ಅಚ್ಚುತ್ ಪೂಜಾರಿ ಸ್ವಾಗತಿಸಿದರು. ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಸದಸ್ಯ ರವೀಂದ್ರ ಕಾಮತ್ ವಂದಿಸಿದರು.