More

    ಸಮಾನತೆ ಹಾದಿಯಲ್ಲಿ ಸಾಗಿದ ಮಹಾನ್ ಪುರುಷ: ಬಿವೈಆರ್ ಬಣ್ಣನೆ

    ಶಿವಮೊಗ್ಗ: ಹನ್ನೆರಡನೇ ಶತಮಾನದ ಜಗಜ್ಯೋತಿ ಶ್ರೀ ಬಸವಣ್ಣನ ಸಾಮಾಜಿಕ ಕ್ರಾಂತಿಗೆ ಬೆನ್ನೆಲುಬಾಗಿ ನಿಂತವರಲ್ಲಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಸಹ ಅಗ್ರಗಣ್ಯರು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಬಣ್ಣಿಸಿದರು.

    ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಭಾನುವಾರ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಉದ್ಘಾಟಿಸಿ ಮಾತನಾಡಿ, ಬಸವೇಶ್ವರರ ಸಮಕಾಲೀನರಾದ ಅಂಬಿಗರ ಚೌಡಯ್ಯ ಅವರು ಸಮಾಜದಲ್ಲಿ ಗಾಢವಾಗಿ ಬೇರೂರಿದ್ದ ಮೌಢ್ಯತೆಯನ್ನು ತೊಡೆದು ಹಾಕುವಲ್ಲಿ ಅವಿರತ ಶ್ರಮಿಸಿದರು. ಬಸವಣ್ಣ ಅವರು ಬೋಧಿಸಿದ ಸರಳ ಜೀವನ, ಕಾಯಕದಲ್ಲಿ ಶ್ರದ್ಧೆ ಮತ್ತು ಸಮಾನತೆಯ ಹಾದಿಯಲ್ಲಿ ಸಾಗಿದ ಮಹಾನ್ ಪುರುಷ ಚೌಡಯ್ಯ ಎಂದರು.
    ಲೋಕಕಲ್ಯಾಣಕ್ಕಾಗಿ ತಮ್ಮ ಒಡೆತನದ ಭೂಮಿಯನ್ನೇ ನಾಡಿಗೆ ಬಿಟ್ಟುಕೊಟ್ಟಿದ್ದರು. ಆಗಿನ ಕಾಲದಲ್ಲೇ ಎಲ್ಲವನ್ನೂ ಹಿಂದಿದ್ದ ಅವರು ನಾಡಿಗಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ್ದರು. ಅವರು 12ನೇ ಶತಮಾನದಲ್ಲಿ ಸಮಾಜದ ಕಲ್ಯಾಣಕ್ಕಾಗಿ ಪಠಿಸಿದ ವಿಚಾರಗಳನ್ನೂ ಇಂದಿಗೂ ಪಾಲಿಸುತ್ತಿದ್ದೇವೆ. ನಾಡಿನ ಏಳಿಗೆಯಲ್ಲಿ ಅವರ ಶ್ರಮ ತುಂಬ ಇದೆ. ಸಾಮಾಜಿಕವಾದ ಅನೇಕ ವಿರೋಧಗಳ ನಡುವೆಯೂ ವಚನ ಸಾಹಿತ್ಯದ ಮೂಲಕ ಸುಧಾರಣೆ ತಂದವರು. ದೋಣಿಗೆ ಹುಟ್ಟು ಹಾಕುವ ಮೂಲಕ ನಂಬಿದವರಿಗೆ ದಡ ಸೇರಿಸುವ ಮಹಾನ್ ಕಾಯಕಯೋಗಿ ಎಂದು ಹೇಳಿದರು.
    ಅಧ್ಯಕ್ಷತೆ ವಹಿಸಿದ್ದ ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿದರು. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಓ.ಎಂ.ಉಮಾಶಂಕರ್ ವಿಶೇಷ ಉಪನ್ಯಾಸ ನೀಡಿದರು. ಜಿಲ್ಲಾ ಗಂಗಾಮತಸ್ಥ ಸಮಾಜದ ಅಧ್ಯಕ್ಷ ಡಿ.ಬಿ.ಕೆಂಚಪ್ಪ, ಜಿಲ್ಲಾ ಮೊಗವೀರರ ಸಂಘದ ಅಧ್ಯಕ್ಷ ಕೆ.ವಿ.ಅಣ್ಣಪ್ಪ, ತಾಲೂಕು ಗಂಗಾಮತಸ್ಥ ಸಮಾಜದ ಅಧ್ಯಕ್ಷ ಸತೀಶ್ ಗಾಂಧಿಬಸಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್.ಉಮೇಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts