More

    ಸಮಾನತೆ ಸಂದೇಶ ಸಾರಿದ ಮಹಾನ್ ಚೇತನ

    ಶಿವಮೊಗ್ಗ: ಭಾರತದಂತಹ ಬಹುತ್ವವುಳ್ಳ ಸಮಾಜದಲ್ಲಿ ಬಹಳಷ್ಟು ಕ್ಷೇತ್ರಗಳಲ್ಲಿ ಹೆಚ್ಚಿನವರು ಅಸಮಾನತೆಯಿಂದ ಬಳಲುತ್ತಿದ್ದರು. ಅಂತಹ ಕಾಲಘಟ್ಟದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ರಚಿಸಿ ಸಾಮಾಜಿಕ ಪರಿವರ್ತನೆಗೆ ನಾಂದಿ ಹಾಡಿದರು ಎಂದು ಭಾರತ ಸ್ಕೌಟ್ ಆ್ಯಂಡ್ ಗೈಡ್ಸ್‌ನ ಜಿಲ್ಲಾ ಗೈಡ್ ಆಯುಕ್ತೆ ಶಕುಂತಲಾ ಚಂದ್ರಶೇಖರ್ ಹೇಳಿದರು.

    ಬಿ.ಎಚ್.ರಸ್ತೆಯ ಭಾರತ್ ಸ್ಕೌಟ್ ಆ್ಯಂಡ್ ಗೈಡ್ಸ್‌ನ ಜಿಲ್ಲಾ ಸಂಸ್ಥೆಯಲ್ಲಿ ಭಾನುವಾರ ಅಂಬೇಡ್ಕರ್ ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು, ಉತ್ತಮ ಸಮಾಜ ರೂಪುಗೊಳ್ಳುವಲ್ಲಿ ಅಂಬೇಡ್ಕರ್ ಕೊಡುಗೆ ಅಪಾರವಾಗಿದ್ದು ಅವರ ಕುರಿತು ಹೆಚ್ಚಿನ ಅಧ್ಯಯನ ನಡೆಸಬೇಕು. ಶೋಷಿತ ವರ್ಗದ ಧ್ವನಿಯಾಗಿದ್ದ ಅಂಬೇಡ್ಕರ್, ಸಮಸಮಾಜದ ಕನಸು ಕಂಡು ಸಂವಿಧಾನದ ಮೂಲಕ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿದರು ಎಂದರು.
    ಸ್ಕೌಟ್ ಆಯುಕ್ತೆ ಕೆ.ಪಿ.ಬಿಂದುಕುಮಾರ್ ಮಾತನಾಡಿ, ಎಲ್ಲ ದೇಶದ ಸಂವಿಧಾನಕ್ಕಿಂತ ಭಾರತದ ಸಂವಿಧಾನ ವಿಶೇಷವಾದದ್ದು. ಅಂಬೇಡ್ಕರ್ ಅವರ ತತ್ವ ಆದರ್ಶ ಗುಣಗಳು ಹಾಗೂ ಆಡಳಿತಾತ್ಮಕ ಧೋರಣೆಯನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದರು. ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಭಾರತಿ ಡಯಾಸ್, ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯ್‌ಕುಮಾರ್, ಪ್ರಮುಖರಾದ ರಾಜೇಶ್ ಅವಲಕ್ಕಿ, ಪಿ.ಎಸ್.ದೀಪು, ಹೇಮಲತಾ, ಮೀನಾಕ್ಷಮ್ಮ, ಜಯಮ್ಮ, ದಾಕ್ಷಾಯಿಣಿ, ರಾಜಕುಮಾರ್, ಚಂದ್ರಶೇಖರಯ್ಯ, ಎನ್.ಆರ್.ಚಂದ್ರಶೇಖರ್, ಮಲ್ಲಿಕಾರ್ಜುನ್ ಖಾನೂರ್ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts