More

    ದುಶ್ಚಟಗಳಿಗೆ ಬಲಿಯಾಗುತ್ತಿರುವ ಯುವ ಸಮೂಹ

    ಚಾಮರಾಜನಗರ: ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಚೇತನ ಕಲಾವಾಹಿನಿ ಕಲಾವಿದರು ಇತ್ತೀಚೆಗೆ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಬೀದಿನಾಟಕ ಪ್ರದರ್ಶಿಸುವ ಮೂಲಕ ಜಾಗೃತಿ ಮೂಡಿಸಿದರು.

    ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಪ್ರಶಾಂತ್ ಮಾತನಾಡಿ, ತಂಬಾಕು ಎಂಬ ದುಶ್ಚಟಕ್ಕೆ ಹೆಚ್ಚು ಯುವಕರು ಬಲಿಯಾಗುತ್ತಿದ್ದಾರೆ. ಇದು ಮನುಷ್ಯನ ಆರೋಗ್ಯದ ಮೇಲೆ ಗಂಬೀರ ಪರಿಣಾಮ ಬೀರುತ್ತದೆ. ಧೂಮಪಾನದಿಂದ ಉಂಟಾಗುವ ಕ್ಯಾನ್ಸರ್, ಗ್ಯಾಂಗ್ರೀನ್, ಪಾರ್ಶ್ವವಾಯು ಸೇರಿದಂತೆ ಇತರ ಕಾಯಿಲೆಗಳಿಗೆ ತುತ್ತಾಗುತ್ತಾನೆ. ಹೀಗಾಗಿ ತಂಬಾಕು ಸೇವನೆಯಿಂದ ಎಲ್ಲರೂ ದೂರವಿರಬೇಕು ಎಂದರು.

    ಸಮಾಜಿಕ ಕಾರ್ಯಕರ್ತ ವೀರಣ್ಣ ಮಾತನಾಡಿ, ಶಾಲಾ-ಕಾಲೇಜು, ಬಸ್, ರೈಲ್ವೆ ನಿಲ್ದಾಣ ಸೆರಿದಂತೆ ಪ್ರಮುಖ ಸ್ಥಳಗಳಲ್ಲಿ ಧೂಮಪಾನ ಮಾಡಿದರೆ ಕೋಟ್ಪಾ ಕಾಯ್ದೆ ಪ್ರಕಾರ 200 ರೂ ದಂಢ ವಿಧಿಸಲಾಗುತ್ತದೆ. ತಂಬಾಕು ಉತ್ಪನ್ನಗಳಿಗೆ ಸಂಬಂಧಿಸಿದ ಜಾಹೀರಾತು ನೀಡುವುದನ್ನು ನಿಷೇಧಿಸಿದ್ದು, ಜಾಹೀರಾತು ನೀಡಿದ್ದಲ್ಲಿ ದಂಡ ವಿಧಿಸಬಹುದು ಎಂದು ತಿಳಿಸಿದರು.

    ಕಲಾವಿದರಾದ ಜಿ.ರಾಜಪ್ಪ, ಎಂ.ಸಿದ್ದರಾಜು, ಮಹೇಶ್‌ಕೋಲು, ಮಂಜುನಾಥ್, ಅಭಿಷೇಕ್.ಎಂ. ನಾಗರತ್ನಮ್ಮ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts