ಅತಿಥಿ ಉಪನ್ಯಾಸಕರ ಹುದ್ದೆಗೆ ನೇಮಕ: ಅರ್ಜಿಯಲ್ಲಿನ ತಪ್ಪು ಸರಿಪಡಿಸಲು 2 ದಿನ ಅವಕಾಶ

online school
Published on

ಬೆಂಗಳೂರು: ಅತಿಥಿ ಉಪನ್ಯಾಸಕರ ಹುದ್ದೆಗೆ 2021-22ನೇ ಶೈಣಿಕ ವರ್ಷಕ್ಕೆ ಅನ್ವಯವಾಗುವಂತೆ ಆನ್​ಲೈನ್​ ಮೂಲಕ ಅರ್ಜಿ ಹಾಕುವಾಗ ತಪ್ಪು ಮಾಹಿತಿ ಒದಗಿಸಿದ್ದ ಅಭ್ಯರ್ಥಿಗಳಿಗೆ, ಅದನ್ನು ಸರಿಪಡಿಸಿಕೊಳ್ಳಲು ಫೆ.12 ಮತ್ತು 13ರ ಮಟ್ಟಿಗೆ ಎರಡು ದಿನಗಳ ಕಾಲಾವಕಾಶ ನೀಡಲಾಗಿದೆ.

ಈ ಕುರಿತು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದಿಪ್​ ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಕ್ಕೆ ಈಗಾಗಲೇ ಮೊದಲನೇ ಸುತ್ತಿನ ಕೌನ್ಸೆಲಿಂಗ್​ ಮುಗಿದಿದೆ. ಆಯ್ಕೆಯಾಗಿರುವ ಬಹುತೇಕರು ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದಾರೆ. ಆದರೆ, ಕೆಲವರು ಅರ್ಜಿ ಸಲ್ಲಿಸುವಾಗ ಸೇವಾ ಅನುಭವ ವಿವರ, ಸ್ನಾತಕೋತ್ತರ ಪದವಿ ಅಂಕಗಳು, ಪಿಎಚ್​.ಡಿ, ಎಂ.ಫಿಲ್​ ಪದವಿಗೆ ಸಂಬಂಧಿಸಿದ ವಿವರಗಳನ್ನು ತಪ್ಪಾಗಿ ತುಂಬಿದ್ದಾರೆ. ಇವುಗಳನ್ನು ಸರಿಪಡಿಸಿಕೊಳ್ಳಲು ಮನವಿ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡು ದಿನ ಅವಕಾಶ ಕೊಡಲಾಗುತ್ತಿದೆ ಎಂದು ವಿವರಿಸಿದ್ದಾರೆ.

ಅಭ್ಯರ್ಥಿಗಳು ವಾಸ್ತವ ಮಾಹಿತಿಯನ್ನು ಒದಗಿಸದೆ, ಪುನಃ ತಪ್ಪು ಮಾಡಿದಲ್ಲಿ ಅಂತಹವರನ್ನು ಆಯ್ಕೆ ಪ್ರಕ್ರಿಯೆಯಲ್ಲಿ ಪರಿಗಣಿಸುವುದಿಲ್ಲ ಎಂದು ಪಿ.ಪ್ರದಿಪ್​ ಸ್ಪಷ್ಟಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net