More

    ಬಕ್ರೀದ್​ ಹಬ್ಬಕ್ಕೆ ಸರ್ಕಾರದಿಂದ ಮಾರ್ಗಸೂಚಿ: ರಸ್ತೆಯಲ್ಲಿ ಪ್ರಾರ್ಥನೆ ಸಲ್ಲಿಸುವಂತಿಲ್ಲ

    ಬೆಂಗಳೂರು: ಜು.10ರಂದು ಬಕ್ರೀದ್​ ಹಬ್ಬ ಆಚರಿಸಲು ಮುಸ್ಲಿಂ ಸಮುದಾಯ ಸಕಲ ಸಿದ್ಧತೆಯಲ್ಲಿದೆ. ಈ ಹಬ್ಬದ ಹಿನ್ನೆಲೆ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಹಬ್ಬದ ದಿನ ರಸ್ತೆಗಳಲ್ಲಿ ಪ್ರಾರ್ಥನೆ ಮಾಡಬಾರದು. ಪ್ರಾರ್ಥನೆ ವೇಳೆ ಎಲ್ಲರೂ ಕೋವಿಡ್​ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ತಿಳಿಸಿದೆ.

    ಬಕ್ರೀದ್​ ಹಬ್ಬವನ್ನು ಶಾಂತಿ ಸುವ್ಯವಸ್ಥೆಯಿಂದ, ಸಾಮರಸ್ಯದಿಂದ ಆಚರಣೆ ಮಾಡಬೇಕು. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಾರ್ವತ್ರಿಕ ಅಧಿನಿಯಮ ಉಲ್ಲಂಘನೆ ಆಗದಂತೆ ಖುರ್ಬಾನಿ (ಪ್ರಾರ್ಥನೆ)ಯನ್ನು ನೇರವೇರಿಸಬೇಕು ಎಂದು ಸರ್ಕಾರ ತಿಳಿಸಿದೆ.

    ಖುರ್ಬಾನಿಯನ್ನು ಸಾರ್ವಜನಿಕ ಪ್ರದೇಶ, ರಸ್ತೆಗಳು, ಶಾಲಾ, ಕಾಲೇಜು, ಆಸ್ಪತ್ರೆ ಆವರಣ, ಉದ್ಯಾನವನ ಹಾಗೂ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿಸಲಾಗಿದೆ. ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಸಂದರ್ಭದಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು. ಪ್ರಾಣಿ ತ್ಯಾಜ್ಯವನ್ನು ಪರಿಣಾಮಕಾರಿಯಾಗಿ ಸಾರ್ವಜನಿಕರಿಗೆ ತೊಂದರೆ ಇಲ್ಲದಂತೆ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಪೊಲೀಸರು, ಮಾಲಿನ್ಯ ನಿಯಂತ್ರಣ ಮಂಡಳಿ ನೀಡುವ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ.

    ಇನ್ಫಿ ಮೂರ್ತಿ ಅಳಿಯ ರಿಷಿ ಸುನಾಕ್​ಗೆ ಬ್ರಿಟನ್​ ಪ್ರಧಾನಿ ಸ್ಥಾನ ಒಲಿಯುವ ಸಾಧ್ಯತೆ

    ಸ್ಮಶಾನಕ್ಕೆ ಸಾಗಿಸುತ್ತಿದ್ದ ಶವವನ್ನು ಚಟ್ಟದಿಂದ ಕೆಳಗಿಳಿಸಿ ಶಿವಮೊಗ್ಗದ ಆಸ್ಪತ್ರೆಗೆ ರವಾನೆ! ಅಂತ್ಯಕ್ರಿಯೆಗೆ ಬಂದ ಗ್ರಾಮಸ್ಥರಿಗೆ ಶಾಕ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts