More

    ವೈಎಸ್​ವಿ ದತ್ತ ಕಾಂಗ್ರೆಸ್​ ಸೇರ್ಪಡೆ ಕುರಿತ ಸುದ್ದಿಗೆ ತೆರೆ ಎಳೆದ ಸಂಸದ ಪ್ರಜ್ವಲ್​ ರೇವಣ್ಣ

    ಕಡೂರು: ಸಂಕ್ರಾಂತಿ ಬಳಿಕ ಮಾಜಿ ಶಾಸಕ ವೈಎಸ್​ವಿ ದತ್ತ ಕಾಂಗ್ರೆಸ್​ ಸೇರಲಿದ್ದಾರೆ ಎಂಬ ಸುದ್ದಿ ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ಕುರಿತು ಸಂಸದ ಪ್ರಜ್ವಲ್​ ರೇವಣ್ಣ ಕೊಟ್ಟ ಸ್ಪಷ್ಟನೆ ಇಲ್ಲಿದೆ.

    ಕಡೂರು ತಾಲೂಕಿನ ಯಗಟಿ ಗ್ರಾಮದಲ್ಲಿ ಮಂಗಳವಾರ ಅರೇಕಲ್ಲಮ್ಮ ದೇವಿಯ ಬಾನಸೇವೆ ಅಂಗವಾಗಿ ವೈಎಸ್​ವಿ ದತ್ತ ಅವರ ನಿವಾಸಕ್ಕೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಜ್ವಲ್​, ಜಾತ್ಯತಿತ ನಿಲುವಿನ ಕಟ್ಟಾಳು ದತ್ತ. ಅವರು ಕಾಂಗ್ರೆಸ್​ ಸೇರುತ್ತೇನೆಂದು ಎಲ್ಲಿಯೂ ಹೇಳಿಲ್ಲ. ಆರು ತಿಂಗಳಿಂದ ಕಾಂಗ್ರೆಸ್​ನವರೇ ಸೃಷ್ಟಿ ಮಾಡಿರುವ ದತ್ತ ಕಾಂಗ್ರೆಸ್​ ಸೇರ್ಪಡೆ ಕುರಿತಾದ ರೆಕ್ಕೆಪುಕ್ಕವಿಲ್ಲದ ಮಾಹಿತಿ ಹರಿದಾಡುತ್ತಿದೆ. ಇದಕ್ಕೆ ತೆರೆ ಎಳೆಯಬೇಕಾಗಿದೆ. ಜೆಡಿಎಸ್​ ಕಾರ್ಯಕರ್ತರು ಇಂಥ ಊಹಾಪೋಹಗಳಿಗೆ ತಲೆಕೆಡಿಸಿಕೊಳ್ಳದೆ ಪಕ್ಷ ಸಂಘಟನೆಯಲ್ಲಿ ಕ್ರಿಯಾಶೀಲರಾಗಬೇಕಿದೆ. ದತ್ತಣ್ಣ ಜೆಡಿಎಸ್​ನಲ್ಲಿ ಭದ್ರವಾಗಿ ನೆಲೆಯೂರಿದ್ದು ಅವರನ್ನು ಗೌರವದಿಂದ ನಡೆಸಿಕೊಳ್ಳಲಾಗುವುದು ಎಂದರು.

    ಮುಂಬರುವ ಜಿಪಂ, ತಾಪಂ ಚುನಾವಣೆಗಳು ದತ್ತಣ್ಣ ನೇತೃತ್ವದಲ್ಲಿ ನಡೆಯಲಿವೆ. ದೇವೇಗೌಡರ ಆಸೆ ದತ್ತ ಅವರನ್ನು ಮಂತ್ರಿ ಸ್ಥಾನದಲ್ಲಿ ನೋಡಬೇಕು ಎಂಬುದಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದತ್ತಗೆ ಎಚ್​.ಡಿ.ರೇವಣ್ಣ ಹಾಗೂ ನಾನು ಎಲ್ಲ ರೀತಿಯ ಸಹಕಾರ ನೀಡುವ ಮೂಲಕ ಅವರನ್ನು ಶಾಸಕರನ್ನಾಗಿ ಮಾಡುತ್ತೇವೆ ಎಂದು ತಿಳಿಸಿದರು.

    ದತ್ತ ಶಾಸಕರಾಗಿದ್ದ ಅವಧಿಯಲ್ಲಿ ಹಾಗೂ ಸಮ್ಮಿಶ್ರ ಸರ್ಕಾರದ ಆಡಳಿತದಲ್ಲಿ ಎಚ್​.ಡಿ.ಕುಮಾರಸ್ವಾಮಿ ಹಾಗೂ ಎಚ್​.ಡಿ. ರೇವಣ್ಣ ಅವರು ಈ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಿದ್ದರು. ದೇವೇಗೌಡರು ಹಾಗೂ ದತ್ತ ಅವರ ನಡುವಿನ ಸಂಬಂಧಕ್ಕೆ ಬೆಲೆ ಕಟ್ಟಲಾಗದು. ಶಿವಮೊಗ್ಗ, ಭದ್ರಾವತಿ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಉಸ್ತುವಾರಿಯನ್ನು ದತ್ತ ಅವರಿಗೆ ಪಕ್ಷದ ವರಿಷ್ಠರು ವಹಿಸಿದ್ದಾರೆ ಎಂದು ಪ್ರಜ್ವಲ್​ ಹೇಳಿದರು.

    ಕಡೂರು ಕ್ಷೇತ್ರದಲ್ಲಿ ಕಾಂಗ್ರೆಸ್​ಗಿಂತ ಜೆಡಿಎಸ್​ ಭದ್ರವಾಗಿದೆ. ಕ್ಷೇತ್ರದಲ್ಲಿ ಸಾಮಾನ್ಯ ಜನರಿಗೆ ಸ್ಪಂದಿಸುವ ಮುಖಂಡನ ಅವಶ್ಯಕತೆ ಇದೆ. ಅಧಿಕಾರ ಯಾರಿಗೂ ಶಾಶ್ವತವಲ್ಲ. ನಾನು ಬಾಲ್ಯದಲ್ಲಿ ದೇಶದ ಪ್ರಧಾನ ಮಂತ್ರಿಯ ಮನೆಯಲ್ಲಿ ಬೆಳೆದಿದ್ದೆ. ಈಗ ಆ ಹುದ್ದೆಯಲ್ಲಿ ನನ್ನ ಕುಟುಂಬದವರಿಲ್ಲ. ಇರುವುದು ಜನರ ಪ್ರೀತಿ ಮಾತ್ರ. ಪ್ರೀತಿಯಿಂದ ಜನರ ಮನಸ್ಸನ್ನು ಗೆಲ್ಲಬೇಕಿದೆ ಎಂದು ಪ್ರತಿಪಾದಿಸಿದರು.

    ಮಾಜಿ ಶಾಸಕ ವೈಎಸ್​ವಿ ದತ್ತ, ಜೆಡಿಎಸ್​ ತಾಲೂಕು ಅಧ್ಯಕ್ಷ ಕೋಡಿಹಳ್ಳಿ ಮಹೇಶ್ವರಪ್ಪ, ಎಪಿಎಂಸಿ ನಿರ್ದೇಶಕ ಬಿದರೆ ಜಗದೀಶ್​, ಜೆಡಿಎಸ್​ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದಶಿರ್ ಸಿ.ಎಚ್​.ಪ್ರೇಮ್​ಕುಮಾರ್​, ಮುಖಂಡರಾದ ಪಂಚನಹಳ್ಳಿ ಪಾಪಣ್ಣ, ಮಚ್ಚೇರಿ ಮಹೇಶ್​, ಸಾಣೇಹಳ್ಳಿ ನಿಂಗಪ್ಪ, ಮುಬಾರಕ್​, ಮೋಹನ್​ ಇತರರಿದ್ದರು.

    ಶಾಲೆಯಲ್ಲೇ ವಿದ್ಯಾರ್ಥಿನಿ ಜತೆ ಮುಖ್ಯಶಿಕ್ಷಕ ರೊಮಾನ್ಸ್​! ತಬ್ಬಿಕೊಂಡು ಮುತ್ತಿಡುತ್ತಿರುವ ವಿಡಿಯೋ ವೈರಲ್​, ಎಚ್​.ಡಿ.ಕೋಟೆಯಲ್ಲಿ ಘಟನೆ

    ಸೇತುವೆ ಮೇಲಿಂದ ಪ್ರಪಾತಕ್ಕೆ ಕಾರು ಪಲ್ಟಿ: ಬಿಜೆಪಿ ಶಾಸಕನ ಪುತ್ರ ಸೇರಿ 7 ವೈದ್ಯಕೀಯ ವಿದ್ಯಾರ್ಥಿಗಳು ದಾರುಣ ಸಾವು

    ಗ್ರಾಪಂ ಕಚೇರಿಯಲ್ಲೇ ಪ್ರೇಮಿಗಳ ಮದುವೆ, ಪೌರೋಹಿತ್ಯ ವಹಿಸಿದ ಪಿಡಿಒ! ನಂಜನಗೂಡಲ್ಲಿ ನವಜೋಡಿ ಪ್ರಕರಣ ಸುಖಾಂತ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts