

ಮಂಗಳೂರು: ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿರುವಾಗಲೇ ಪೊಲೀಸ್ ಮುಖ್ಯ ಪೇದೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಕೊಣಾಜೆಯಲ್ಲಿ ಸಂಭವಿಸಿದೆ.
ಕೊಣಾಜೆ ಪೊಲೀಸ್ ಠಾಣೆಯ ಮುಖ್ಯಪೇದೆ ಜಗನ್ನಾಥ(44) ಮೃತರು. ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಜಗನ್ನಾಥ ಅವರಿಗೆ ಶನಿವಾರ ಬೆಳಗ್ಗೆ ಎದೆನೋವು ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಕುಸಿದು ಬಿದ್ದರು. ಕೂಡಲೇ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಬದುಕಲಿಲ್ಲ.
ಜಗನ್ನಾಥ ಅವರು ಪುತ್ತೂರು ತಾಲೂಕಿನ ಸವಣೂರು ಗ್ರಾಮದವರು. ಉಳ್ಳಾಲ, ಕೊಣಾಜೆ ಠಾಣೆಯಲ್ಲಿ ಅನೇಕ ವರ್ಷಗಳಿಂದ ಕರ್ತವ್ಯ ನಿರ್ವಹಿಸಿದ್ದು, ಎಲ್ಲರಿಗೂ ಜಗ್ಗ ಎಂದೇ ಪರಿಚಿತರಾಗಿದ್ದರು. ಮೃತರಿಗೆ ಪತ್ನಿ ಮತ್ತು ಇಬ್ಬರು ಪುತ್ರಿಯರು ಇದ್ದಾರೆ.