More

    ಬೈಂದೂರಿನಲ್ಲಿ ಧಾರಾಕಾರ ಮಳೆ: ನದಿ ತೀರದ ಗ್ರಾಮಗಳಲ್ಲಿ ನೆರೆ

    ಬೈಂದೂರು: ಸತತ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಸೌಪರ್ಣಿಕ ನದಿಯ ನೀರಿನ ಮಟ್ಟ ಹೆಚ್ಚಾಗಿದ್ದು, ನದಿಯ ತೀರದ ಊರುಗಳಾದ ಸಾಲ್ಬುಡ, ನಾವುಂದ, ಬಡಾಕೆರೆ, ಹಡವು, ಚಿಕ್ಕಳ್ಳಿ, ಪಡುಕೋಣೆ, ಮರವಂತೆ ಸೇರಿದಂತೆ ಹಲವಾರು ಊರುಗಳ ಸಂಪರ್ಕ ಕಳೆದುಕೊಂಡಿದೆ. ಬಹುತೇಕ ಭಾಗ ಜಲಾವೃತಗೊಂಡಿದ್ದು, ಜನ-ಜೀವನ ಅಸ್ತವ್ಯಸ್ತಗೊಂಡಿದೆ.

    ದೋಣಿ ಮೂಲಕವೇ ಅಗತ್ಯ ವಸ್ತುಗಳನ್ನು ತರಬೇಕಾದ ಪರಿಸ್ಥಿತಿ ಉಂಟಾಗಿದೆ. ಪಶ್ಚಿಮ ಘಟ್ಟದಲ್ಲಿ ಅತಿವೃಷ್ಟಿ ಕಾರಣ ನೆರೆ ಭೀತಿ ಆವರಿಸಿದೆ. ಸ್ಥಳೀಯ ಯುವಕರು ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸುತ್ತಿದ್ದಾರೆ. ಚಿಗುರೊಡೆದ ಭತ್ತದ ಕೃಷಿಗೆ ಮತ್ತೆ ಹಾನಿಯಾಗುವ ಪರಿಸ್ಥಿತಿ ಎದುರಾಗಿದೆ.

    ನಾವುಂದ ಗ್ರಾಮದ 4ನೇ ವಾರ್ಡಿನ ಹಳೇ ಹೆದ್ದಾರಿ ಸಮೀಪದ ಶ್ರೀಮತಿ ಗಾಣಿಗ ಮನೆ ಮೇಲೆ ತೆಂಗಿನಮರ ಉರುಳಿಬಿದ್ದು ಮನೆ ಸಂಪೂರ್ಣವಾಗಿ ಹಾನಿಯಾಗಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

    ಸ್ಥಳೀಯ ಗ್ರಾಪಂ ಸದಸ್ಯೆ ಸುಲೋಚನಾ ಗಾಣಿಗ, ರಾಜೇಶ್ ಪೂಜಾರಿ ನಾವುಂದ, ಗ್ರಾಮಸ್ಥರ ನೆರವಿನಿಂದ ಮರವನ್ನು ತೆರವುಗೊಳಿಸಿ ಮನೆಯಲ್ಲಿ ವಾಸವಾಗಿದ್ದ ತಾಯಿ, ಮಗು ಹಾಗೂ ಶ್ರೀಮತಿ ಗಾಣಿಗ ಇವರನ್ನು ಸ್ಥಳಾಂತರಿಸಲಾಗಿದೆ. ಶ್ರೀಮತಿ ಗಾಣಿಗ ಅವರಿಗೆ ಸ್ವಲ್ಪ ಗಾಯವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಶ್ರೀ ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

    ಹಳ್ಳದಲ್ಲಿ ಕೊಚ್ಚಿಹೋದ ಕಾರು: ಶ್ರಾವಣ ಮಾಸದ ಹಿನ್ನೆಲೆ ಸಂಬಂಧಿಕರ ಮನೆಗೆ ತೆರಳುತ್ತಿದ್ದವ ದುರಂತ ಅಂತ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts