ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

rain dhakshina kannada jille
Published on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ತಗ್ಗುಪ್ರದೇಶಗಳು ಮಿನಿ ಕೆರೆಯಂತಾಗಿದ್ದು, ರಸ್ತೆಗಳು ಜಲಾವೃತಗೊಂಡಿವೆ. ಪಿಯುಸಿ ಮತ್ತು ಪದವಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮಳೆಯಿಂದಾಗಿ ತರಗತಿಗೆ ಬರಲು ವಿದ್ಯಾರ್ಥಿಗಳಿಗೆ ತೊಂದರೆಯಾದಲ್ಲಿ ಅಂತಹ ಪ್ರದೇಶದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ. ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಹಾಗೂ ತಾಲೂಕುಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಿ ಎಂದು ತಹಸೀಲ್ದಾರ್ ಮತ್ತು ಬಿಇಒಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಬುಧವಾರ ರಾತ್ರಿಯಿಂದಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದ್ದು, ಇಂದು ಕೂಡ ಮೋಡ ಕವಿದ ವಾತಾವರಣ ಇದೆ. ಅಲ್ಲಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಅಡಕೆ, ತೆಂಗು ತೋಟಗಳಲ್ಲೂ ಐದಾರು ಅಡಿ ಎತ್ತರದಷ್ಟು ನೀರು ತುಂಬಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲ, ಉತ್ತರಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಮಳೆಯಾಗುತ್ತಿದೆ. ಹೊನ್ನಾವರಂ ಕುಮುಟಾ,  ಕಾರವಾಟ, ಅಂಕೋಲಾದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net