More

    ಚಾಮರಾಜಪೇಟೆ ಆಟದ ಮೈದಾನದಲ್ಲಿ ಗಣೇಶೋತ್ಸವಕ್ಕೆ ಗ್ರೀನ್​ ಸಿಗ್ನಲ್​ ಕೊಟ್ಟ ಹೈಕೋರ್ಟ್

    ಬೆಂಗಳೂರು: ಚಾಮರಾಜಪೇಟೆ ಆಟದ ಮೈದಾನದಲ್ಲಿ ಗಣೇಶೋತ್ಸವಕ್ಕೆ ಗ್ರೀನ್​ ಸಿಗ್ನಲ್​ ಸಿಕ್ಕಿದ್ದು, ಹಿಂದುಪರ ಸಂಘಟನೆಗಳು ಸಂತಸ ವ್ಯಕ್ತಪಡಿಸಿವೆ.

    ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ಕೋರಿ ಜಟಾಪಟಿ ನಡೆದಿರುವ ಬೆನ್ನಲ್ಲೇ, ಇದನ್ನು ಆಟದ ಮೈದಾನವಾಗಿಯಷ್ಟೇ ಬಳಸಿಕೊಳ್ಳಬೇಕು ಎಂದು ಹೈಕೋರ್ಟ್​ ಏಕ ಸದಸ್ಯ ಪೀಠ ಗುರುವಾರ ಸ್ಪಷ್ಟಪಡಿಸಿತ್ತು. ರಂಜಾನ್​ ಹಾಗೂ ಬಕ್ರೀದ್​ ಹಬ್ಬಗಳ ಸಂದರ್ಭದಲ್ಲಿ ಮಾತ್ರ ಮುಸ್ಲಿಮರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಬೇಕು. ಯಥಾಸ್ಥಿತಿ ಕಾಯ್ದುಕೊಳ್ಳಬೇಕು. ಅರ್ಜಿ ವಿಲೇವಾರಿಯಾದ ನಂತರ ಮೈದಾನ ಅಭಿವೃದ್ಧಿಪಡಿಸಬಹುದು ಎಂದು ಸರ್ಕಾರ ಹಾಗೂ ಬಿಬಿಎಂಪಿಗೆ ಮಧ್ಯಂತರ ಆದೇಶ ನೀಡಿತ್ತು. ಇದೀಗ ಧಾರ್ಮಿಕ ಕಾರ್ಯಗಳಿಗೆ ಅವಕಾಶ ನೀಡುವ ಅಧಿಕಾರನ್ನು ಸರ್ಕಾರಕ್ಕೆ ಹೈಕೋರ್ಟ್‌ ನೀಡಿದೆ. ಆ.31 ರಿಂದ ನಿರ್ದಿಷ್ಟ ಅವಧಿಗೆ ಅನುಮತಿ ಕೊಡಬಹುದು ಎಂದು ಸೂಚಿಸಿದೆ. ಹಾಗಾಗಿ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಅನುಮತಿ ಸಿಗುವ ನಿರೀಕ್ಷೆಯಲ್ಲಿ ಹಿಂದುಪರ ಸಂಘಟನೆಗಳಿವೆ.

    ಚಾಮರಾಜಪೇಟೆ ಮೈದಾನದಲ್ಲಿ 11 ದಿನಗಳ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ 7 ವಿವಿಧ ಸಂಘ ಸಂಸ್ಥೆಗಳಿಂದ ಅರ್ಜಿಗಳು ಸಲ್ಲಿಕೆಯಾಗಿದ್ದವು. ಆದರೆ, ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡದಂತೆ ಒತ್ತಾಯಿಸಿ ಎರಡು ಸಂಘಟನೆಗಳು ಅರ್ಜಿ ಸಲ್ಲಿಸಿದ್ದವು. ಪರ-ವಿರೋಧದ ಅರ್ಜಿಗಳನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗಿತ್ತು. ಈ ಮಾಹಿತಿಯನ್ನು ಹೈಕೋರ್ಟ್​ಗೂ ನೀಡಲಾಗಿದ್ದು, ಆಟದ ಮೈದಾನವನ್ನು ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್​ ನ್ಯಾ. ಹೇಮಂತ್ ಚಂದನ್ ಗೌಡರ್ ಅವರಿದ್ದ ಪೀಠ ಗುರುವಾರ ಮಧ್ಯಂತರ ಆದೇಶ ನೀಡಿತ್ತು.

    ಏಕಪೀಠ ನೀಡಿದ್ದ ಮಧ್ಯಂತರ ಆದೇಶವನ್ನು ತಿದ್ದುಪಡಿ ಮಾಡಿದ ಹಂಗಾಮಿ ಮುಖ್ಯನ್ಯಾಯ ಮೂರ್ತಿ ಅಲೋಕ್​ ಅರಾಧೆ ನೇತೃತ್ವದ ವಿಭಾಗೀಯ ಪೀಠ, ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹಸಿರು ನಿಶಾನೆ ತೋರಿದೆ. ಅನುಮತಿ ಕೋರಿದ ಅರ್ಜಿಗಳನ್ನು ಪರಿಶೀಲಿಸಿ ಆ.31 ರಿಂದ ನಿರ್ದಿಷ್ಟ ಅವಧಿಗೆ ಧಾರ್ಮಿಕ- ಸಾಂಸ್ಕೃತಿಕ ಆಚರಣೆಗೆ ಸರ್ಕಾರ ಅನುಮತಿ ನೀಡಬಹುದು ಎಂದು ಹೇಳಿದೆ.

    ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಮಾಡಂಗಿಲ್ಲ: ಜಮೀರ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts