More

    ಬಂದೂಕು ಹಿಂದಿರುಗಿಸುವಂತೆ ಅಧಿಕೃತ ಪರವಾನಗಿದಾರರು ಕೋರಿದರೆ ಕ್ರಮಕೈಗೊಳ್ಳಲು ಸರ್ಕಾರಕ್ಕೆ ‘ಹೈ ’ ನಿರ್ದೇಶನ

    ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆಯ ಪಾಲನೆಗೆ ಅನುಗುಣವಾಗಿ ಸರ್ಕಾರದ ಸುಪರ್ದಿಗೆ ಒಪ್ಪಿಸಲಾಗಿರುವ ಬಂದೂಕು ಹಿಂದಿರುಗಿಸುವಂತೆ ಕೋರಿ ಅಧಿಕೃತ ಪರವಾನಗಿದಾರರು ಮನವಿ ಸಲ್ಲಿಸಿದರೆ, ಅಂತಹ ಮನವಿಗಳನ್ನು ಪರಿಶೀಲಿಸಿ ಆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಡ್ವೊಕೇಟ್ ಜನರಲ್ ಹೈಕೋರ್ಟ್‌ಗೆ ತಿಳಿಸಿದರು.

    ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಐವರನಾಡು ಗ್ರಾಮದ ಕೃಷಿಕ ಕೆ ವಿ ಪ್ರಸಾದ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಡೆಸಿತು.

    ಅರ್ಜಿದಾರರ ಮನವಿಗೆ ಸಂಬಂಧಿಸಿದಂತೆ ಅಡ್ವೊಕೇಟ್ ಜನರಲ್ ಕೆ ಶಶಿಕಿರಣ ಶೆಟ್ಟಿ ಅವರು ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಮಾರ್ಗದರ್ಶಿ ಸೂತ್ರಗಳನ್ನು ಹೊರಡಿಸಿದೆ. ಇದರ ಅನುಸಾರ ಪರವಾನಗಿ ಹೊಂದಿದ ಆಯುಧಗಳನ್ನು ಸುಪರ್ದಿಗೆ ಒಪ್ಪಿಸಲು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಅಗತ್ಯ ಇರುವವರಿಗೆ ಇದರಿಂದ ವಿನಾಯಿತಿ ನೀಡಬಹುದಾಗಿದೆ. ಆದರೆ, ಇದನ್ನು ಆಯಾ ಜಿಲ್ಲಾಧಿಕಾರಿಗಳೇ ನಿರ್ಧರಿಸಲಿದ್ದಾರೆ ಎಂದರು.

    ಇದನ್ನು ಪರಿಗಣಿಸಿದ ನ್ಯಾಯಪೀಠವು ಅರ್ಜಿದಾರರು ಮನವಿ ಸಲ್ಲಿಸಿದರೆ, ಎರಡು ದಿನಗಳಲ್ಲಿ ಸೂಕ್ತ ಆದೇಶ ಹೊರಡಿಸಿ ಎಂದು ಸೂಚಿಸಿತು. ಪ್ರಕರಣದ ಪ್ರತಿವಾದಿಗಳಾದ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಸುಳ್ಯ ತಾಲ್ಲೂಕು ತಹಶೀಲ್ದಾರ್, ಬೆಳ್ಳಾರೆ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ, ವಿಚಾರಣೆ ಮುಂದೂಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts