24.9 C
Bangalore
Wednesday, December 11, 2019

ಪ್ರಿಯಾಂಕಾ ಗಾಂಧಿ ಮನೆಯಲ್ಲಿ ಭದ್ರತೆ ಉಲ್ಲಂಘನೆಯಾಗಲು ‘ರಾಹುಲ್​ ಗಾಂಧಿ’ ಆಗಮನದ ಮಾಹಿತಿ ಕಾರಣ ! ಅಮಿತ್​ ಷಾ ಘಟನೆಯನ್ನು ವಿವರಿಸಿದ್ದು ಹೀಗೆ…

Latest News

ಚಾಲೆಂಜಿಂಗ್​ ಸ್ಟಾರ್​ ತೂಗುದೀಪ ದರ್ಶನ್​ ಅಭಿನಯದ ಚಿತ್ರ ಒಡೆಯ ನಾಳೆ ತೆರೆಗೆ : 300ಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ಪ್ರದರ್ಶನ

ಬೆಂಗಳೂರು: ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿಯನಯದ ಒಡೆಯ ಸಿನಿಮಾ ನಾಳೆ (ಡಿ.12ರ ಗುರುವಾರ) ತೆರೆಗೆ ಅಪ್ಪಳಿಸಲಿದೆ. ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಒಡೆಯ ಸಿನಿಮಾ...

ವಿಷ್ಣು‌ ಸೇನಾ‌ ಸಮಿತಿಯಿಂದ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ ಆಯೋಜನೆ

ಬಳ್ಳಾರಿ: ಚಿತ್ರನಟ ವಿಷ್ಣುವರ್ಧನ್ ಅವರ 10ನೇ ಪುಣ್ಯಸ್ಮರಣೆ ಹಿನ್ಮೆಲೆಯಲ್ಲಿ ವಿಷ್ಣು ಸೇನಾ ಸಮಿತಿಯಿಂದ ಡಿ.29ರಂದು ನಗರ ಹಾಗೂ ತಾಲೂಕಿನ ಕಮ್ಮರಚೇಡು ಗ್ರಾಮದಲ್ಲಿ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಡಿ.29ರಂದು...

ಮೈಸೂರಿನ ಬನುಮಯ್ಯ ಸಂಸ್ಥೆಯ ಶತಮಾನೋತ್ಸವಕ್ಕೆ ಚಾಲನೆ

ಮೈಸೂರು: ಧರ್ಮಪ್ರಕಾಶ ಡಿ.ಬನುಮಯ್ಯ ವಿದ್ಯಾಸಂಸ್ಥೆ ಶತಮಾನೋತ್ಸವ ಸಮಾರಂಭವನ್ನು ಶಾಸಕ ಎಸ್.ಎ.ರಾಮದಾಸ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಂತವೀರ...

ಮೊದಲ ಪತ್ನಿ, ಮೂವರು ಮಕ್ಕಳನ್ನು ಮನೆಯಿಂದ ಹೊರದಬ್ಬಿದ ಪತಿ: ಚಳಿಯಲ್ಲೇ ಇಡೀ ರಾತ್ರಿ ಕಳೆದ ಪತ್ನಿ, ಮಕ್ಕಳು

ಬೆಳಗಾವಿ: ಮೊದಲ ಪತ್ನಿ ಹಾಗೂ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ಬೆಳಗಾವಿಯ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ, ಮೊದಲ...

ಚಿತ್ರದುರ್ಗ: ಆರ್ ಒಗಳ ನಿರ್ವಣೆ ಇನ್ನು ಮುಂದೆ ಇಲಾಖೆ ಹೊಣೆ

ಚಿತ್ರದುರ್ಗ: ಶುದ್ಧ ಕುಡಿವ ನೀರು ಘಟಕಗಳ ಹೊಣೆ ಇನ್ನು ಮುಂದೆ ಕುಡಿವ ನೀರು ‌ಮತ್ತು ನೈರ್ಮಲ್ಯ ಇಲಾಖೆಯದ್ದಾಗಿದೆ ಎಂದು ಜಿಪಂ ಸಿಇಒ ಸಿ.ಸತ್ಯಭಾಮ ಹೇಳಿದರು. ಜಿಪಂ ಮಾಸಿಕ...

ನವದೆಹಲಿ: ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಮನೆಯಲ್ಲಿ ಕಳೆದವಾರ ಆಗಿರುವ ಭದ್ರತಾ ಉಲ್ಲಂಘನೆಯಾಗಿದ್ದರ ಬಗ್ಗೆ ಇಂದು ಗೃಹ ಸಚಿವ ಅಮಿತ್​ ಷಾ ರಾಜ್ಯಸಭೆಯಲ್ಲಿ ಮಾತನಾಡಿದರು.

ಘಟನೆಗೆ ಸಂಬಂಧಪಟ್ಟಂತೆ ಉನ್ನತ ಮಟ್ಟದ ವಿಚಾರಣೆ ನಡೆದಿದೆ ಹಾಗೂ ಮೂವರು ರಕ್ಷಣಾ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದರು.

ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಮನೆಗೆ ಅಪರಿಚಿತರು ಅಷ್ಟು ಸುಲಭವಾಗಿ ಪ್ರವೇಶಿಸಲು ಏನು ಕಾರಣ, ಅಲ್ಲಿಂದ ಭದ್ರತಾ ಸಿಬ್ಬಂದಿ ಯಾಕೆ ಅವರನ್ನು ತಡೆಯಲಿಲ್ಲ ಎಂಬುದನ್ನು ವಿವರಿಸಿದ ಅಮಿತ್​ ಷಾ, ಪ್ರಿಯಾಂಕಾ ಗಾಂಧಿಯವರ ಮನೆಯಲ್ಲಿ ನಿಯೋಜಿಸಲಾಗಿದ್ದ ಭದ್ರತಾ ಸಿಬ್ಬಂದಿಗೆ ಅಂದು (ನ.25) ರಾಹುಲ್​ ಗಾಂಧಿಯವರು ಮನೆಗೆ ಬರುತ್ತಾರೆ ಎಂದು ತಿಳಿಸಲಾಗಿತ್ತು. ಅವರೂ ಕಪ್ಪುಬಣ್ಣದ ಟಾಟಾ ಸಫಾರಿಯಲ್ಲೇ ಬರುತ್ತಾರೆಂದು ಮಾಹಿತಿ ಇತ್ತು. ಬಹುತೇಕ ಅವರು ಬರಬಹುದಾದ ವೇಳೆಯಲ್ಲೇ ಈ ಅಪರಿಚಿತರು ಅದೇ ಬಣ್ಣದ ಟಾಟಾ ಸಫಾರಿಯಲ್ಲಿ ಆಗಮಿಸಿದರು. ಅಲ್ಲಿನ ಭದ್ರತಾ ಸಿಬ್ಬಂದಿ ಅದು ರಾಹುಲ್​ ಗಾಂಧಿಯವರ ಕಾರೇ ಇರಬೇಕು ಎಂದು ಭಾವಿಸಿ ಯಾವುದೇ ಪರಿಶೀಲನೆ ಮಾಡದೆ ಒಳಗೆ ಬಿಟ್ಟರು. ಯಾಕೆಂದರೆ ರಾಹುಲ್​ ಗಾಂಧಿಯವರು ಪ್ರಿಯಾಂಕಾ ಗಾಂಧಿಯವರ ಮನೆ ಪ್ರವೇಶ ಮಾಡಲು ಯಾವುದೇ ನಿರ್ಬಂಧವಾಗಲಿ, ಸೆಕ್ಯುರಿಟಿ ಚೆಕ್​ ಆಗಲೀ ಇಲ್ಲ.  ಹೀಗೆ ಭದ್ರತೆ ಉಲ್ಲಂಘನೆ ಆಗಿದ್ದು ಕಾಕತಾಳೀಯ ಎಂದು ಗೃಹಸಚಿವರು ತಿಳಿಸಿದರು.

ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಕುಟುಂಬಕ್ಕೆ ನೀಡಿದ್ದ ಸ್ಪೆಷಲ್​ ಪ್ರೊಟೆಕ್ಷನ್ ಗ್ರೂಪ್​ (ಎಸ್​ಪಿಜಿ) ಭದ್ರತೆಯನ್ನು ಇತ್ತೀಚೆಗೆ ಹಿಂಪಡೆದು, ಅವರಿಗೆ ಸಿಆರ್​ಪಿಎಫ್​ ಭದ್ರತೆ ಒದಗಿಸಲಾಗಿದೆ. ಹೀಗಾಗಿ ಪ್ರಿಯಾಂಕಾ ಗಾಂಧಿ ಮನೆಗೆ ನೀಡಿದ್ದ ಎಸ್​ಪಿಜಿ ಭದ್ರತೆಯೂ ಈಗಿಲ್ಲ. ಇದೇ ಕಾರಣಕ್ಕೆ ಕಳೆದ ವಾರ ಅವರ ಲೂಧಿ ಎಸ್ಟೇಟ್​ ಮನೆಯಲ್ಲಿ ನಡೆದಿದ್ದ ಭದ್ರತಾ ಉಲ್ಲಂಘನೆ ವಿಷಯವನ್ನು ಕಾಂಗ್ರೆಸ್​ ಇಂದು ಲೋಕಸಭೆಯ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿತ್ತು.

ಅಷ್ಟೇ ಅಲ್ಲದೆ, ಪ್ರಿಯಾಂಕಾ ಪತಿ ರಾಬರ್ಟ್​ ವಾದ್ರಾ, ಎಸ್​ಪಿಜಿ ಭದ್ರತೆ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದರು.

ಸ್ಪೆಶಲ್​ ಪ್ರೊಟೆಕ್ಷನ್​ ಗ್ರೂಪ್​ (ತಿದ್ದುಪಡಿ) ವಿಧೇಯಕ ಇಂದು ರಾಜ್ಯಸಭೆಯಲ್ಲೂ ಅಂಗೀಕಾರ ಆಗಿದೆ. ಇನ್ನು ಈ ಬಿಲ್​ ಅನ್ವಯ ಮಾಜಿ ಪ್ರಧಾನಿ ಹಾಗೂ ಅವರ ಕುಟುಂಬಕ್ಕೆ ನಿಗದಿತ ಅವಧಿಯವರೆಗೆ ಮಾತ್ರ ಎಸ್​ಪಿಜಿ ಭದ್ರತೆ ಇರುತ್ತದೆ. (ಏಜೆನ್ಸೀಸ್​)

Stay connected

278,741FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...