More

    ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ನಿಷೇಧಿಸಿ ಹೊರಡಿಸಿದ್ದ ಸರ್ಕಾರದ ಆದೇಶ ರದ್ದು: ಹೈಕೋರ್ಟ್​

    ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ನಿಷೇಧಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್​ ರದ್ದು ಮಾಡಿದೆ.

    ಕರ್ನಾಟಕ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತಂದು ಆನ್‌ಲೈನ್ ಜೂಜಾಟವನ್ನು ರಾಜ್ಯ ಸರ್ಕಾರ ನಿಷೇಧಿಸಿತ್ತು. ಇದನ್ನು ಪ್ರಶ್ನಿಸಿ ಆನ್‌ಲೈನ್ ಗೇಮಿಂಗ್ ಕಂಪನಿಗಳು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು.

    ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುತಾರಾಜ್ ಅವಸ್ಥಿ ಮತ್ತು ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ 2021ರ ಡಿ. 22ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು. ಇಂದು(ಸೋಮವಾರ) ತೀರ್ಪು ಪ್ರಕಟಿಸಿದೆ.

    ಕರ್ನಾಟಕ ಪೊಲೀಸ್ (ತಿದ್ದುಪಡಿ) ಕಾಯ್ದೆ- 2021 ಅನ್ನು ರದ್ದು ಪಡಿಸಿದ ಹೈಕೋರ್ಟ್, ಕಾಯ್ದೆಯು ಅಸಂವಿಧಾನಿಕ ಎಂದು ಘೋಷಿಸಿದೆ. ಆದರೆ, ಆನ್‌ಲೈನ್ ಬೆಟ್ಟಿಂಗ್ ನಿಷೇಧಕ್ಕೆ ಸಂವಿಧಾನದ ನಿಯಮಾನುಸಾರ ಹೊಸದಾಗಿ ಕಾಯ್ದೆ ತರಲು ಈ ಆದೇಶ ತಡೆಯೊಡ್ಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

    ಆಸ್ಪತ್ರೆಯಲ್ಲೇ ಕುಸಿದುಬಿದ್ದ ನರ್ಸ್ ಮೇಲಕ್ಕೆ ಏಳಲೇ ಇಲ್ಲ… ಸಾವಲ್ಲೂ ಸಾರ್ಥಕತೆ ಮೆರೆದ ಗಾನವಿ, ಈ ಸ್ಟೋರಿ ಓದಿದ್ರೆ ಮನಸ್ಸು ಭಾರ

    ಭೂ ವೀಕ್ಷಣಾ ಉಪಗ್ರಹ EOS-04 ಸೇರಿ ಮೂರು ಉಪಗ್ರಹಗನ್ನು ಯಶ್ವಸ್ವಿಯಾಗಿ ಉಡಾವಣೆ ಮಾಡಿದ ಇಸ್ರೋ

    ಪ್ರೇಮ ವಿವಾಹವಾದ್ರೂ ಮತ್ತೊಬ್ಬನ ಮೇಲೆ ಮೋಹ: ಪುರುಷನ ಚಪ್ಪಲಿ, ಪ್ರಸಾದದ ಬ್ಯಾಗು ಬಿಚ್ಚಿಟ್ಟ ಭಯಾನಕ ರಹಸ್ಯವಿದು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts