18 C
Bangalore
Friday, December 6, 2019

ಹಣ ವಸೂಲಿಗಿಳಿದ ಹೆದ್ದಾರಿ ಗಸ್ತು ಸಿಬ್ಬಂದಿ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಬಂಕಾಪುರ: ಹೆದ್ದಾರಿ ಗಸ್ತು ವಾಹನದ ಪೊಲೀಸ್ ಸಿಬ್ಬಂದಿ ತಮ್ಮ ಕಾರ್ಯ ವ್ಯಾಪ್ತಿ ಮೀರಿ ವಾಹನ ಚಾಲನಾ ಪತ್ರ, ವಿಮೆ ದಾಖಲೆ ಕೇಳುವ ನೆಪದಲ್ಲಿ ವಾಹನ ಸವಾರರಿಂದ ಹಣ ವಸೂಲಿ ಮಾಡುತ್ತಿರುವ ಆರೋಪ ಸಾರ್ವಜನಿಕರಿಂದ ಕೇಳಿಬರುತ್ತಿದೆ.

ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪರಾಧ ಚಟುವಟಿಕೆಗಳ ನಿಯಂತ್ರಣ ಹಾಗೂ ಅಪಘಾತದ ಸಂದರ್ಭಗಳಲ್ಲಿ ಗಾಯಾಳುಗಳಿಗೆ ಸಹಾಯ ಹಾಗೂ ಸುಗಮ ಸಂಚಾರ ಒದಗಿಸುವ ಉದ್ದೇಶದಿಂದ ಗೃಹ ಇಲಾಖೆ ಹೆದ್ದಾರಿಯಲ್ಲಿ ಗಸ್ತು ವಾಹನ ನಿಯೋಜಿಸಿದೆ. ಆದರೆ, ಗಸ್ತು ವಾಹನ ಸಿಬ್ಬಂದಿ ತಮ್ಮ ಕಾರ್ಯ ವ್ಯಾಪ್ತಿ ಮೀರಿ ರಾಷ್ಟ್ರೀಯ ಹೆದ್ದಾರಿ 4 ಮತ್ತು ರಾಜ್ಯ ಹೆದ್ದಾರಿಗಳ ಆಯಕಟ್ಟಿನ ಜಾಗದಲ್ಲಿ ವಾಹನ ನಿಲ್ಲಿಸಿ ಡಿಎಲ್, ವಾಹನ ದಾಖಲಾತಿ ನೆಪದಲ್ಲಿ ಬೈಕ್, ಲಾರಿ, ಟ್ರ್ಯಾಕ್ಟರ್ ಚಾಲಕರಿಂದ ಹಣ ವಸೂಲಿ ಮಾಡುತ್ತಿದ್ದಾರೆ. ಇದರಿಂದ ನಿತ್ಯ ಬೆಳಗ್ಗೆ ಮತ್ತು ಸಂಜೆ ಕೃಷಿ ಚಟುವಟಿಕೆ ಮುಗಿಸಿಕೊಂಡು ಬೈಕ್​ಗಳ ಮೇಲೆ ಹೊಲ ಮತ್ತು ಮನೆಗಳಿಗೆ ಸಂಚರಿಸುವ ರೈತರು ಮತ್ತು ಕೃಷಿ ಕಾರ್ವಿುಕರಿಗೆ ನಿತ್ಯ ಕಿರಿಕಿರಿ ಉಂಟಾಗುತ್ತಿದೆ ಎಂದು ವಾಹನ ಸವಾರರು ಆರೋಪಿಸುತ್ತಿದ್ದಾರೆ.

ಇತ್ತೀಚೆಗೆ ಬಂಕಾಪುರ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದ ಪೂರ್ವ ವಲಯ ಐಜಿಪಿ ಶರತ್​ಚಂದ್ರ ಅವರಿಗೂ ಹಣ ವಸೂಲಿ ಮಾಡುವ ಹೈವೆ ಗಸ್ತು ವಾಹನದ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳುವಂತೆ ನಾಗರಿಕ ಸಭೆಯಲ್ಲಿ ಕುಂದೂರ ಗ್ರಾಮದ ಯುವಕರು ಒತ್ತಾಯಿಸಿದ್ದರು.

ರಸ್ತೆ ಸುರಕ್ಷತೆ, ವಾಹನ ಚಾಲನಾ ಪರವಾನಗಿ ಸೇರಿ ಇತರ ದಾಖಲಾತಿ ಪರಿಶೀಲಿಸಿ ಸೂಕ್ತ ದಾಖಲಾತಿ ಇಲ್ಲದ ಸವಾರರಿಗೆ ದಂಡ ವಿಧಿಸಿ ಎಚ್ಚರಿಸಲು ಪೊಲೀಸ್ ಇಲಾಖೆ ಸಿಬ್ಬಂದಿ ನಿಯೋಜಿಸಿ ಸೂಕ್ತ ಕ್ರಮ ಕೈಗೊಳ್ಳುತ್ತದೆ. ಆದರೆ, ಹೆದ್ದಾರಿ ಗಸ್ತು ವಾಹನದ ಸಿಬ್ಬಂದಿ ತಮ್ಮ ವ್ಯಾಪ್ತಿ ಮೀರಿ ಯಾವುದೇ ಅಧಿಕೃತ ರಸೀದಿ ನೀಡದೇ ಮಶೀನ್​ನಲ್ಲಿ ಮುದ್ರಿತ ಚಿಕ್ಕ ಚೀಟಿಯ ಮೇಲೆ ಪೆನ್ನಿನಿಂದ 100, 200 ರೂ. ಬರೆದು ಹಣ ವಸೂಲಿ ಮಾಡುತ್ತಿದ್ದಾರೆ. ಈ ಗಸ್ತು ವಾಹನದ ಸಿಬ್ಬಂದಿ ಮೇಲೆ ಇಲಾಖೆ ಕ್ರಮ ಜರುಗಿಸಿ ಸಾರ್ವಜನಿಕರಿಗಾಗುತ್ತಿರುವ ತೊಂದರೆ ತಪ್ಪಿಸಬೇಕು ಎನ್ನುವುದು ಸಾರ್ವಜನಿಕರ ಆಗ್ರಹಿಸಿದ್ದಾರೆ.

ಹೆದ್ದಾರಿ ಗಸ್ತು ವಾಹನ ಸಿಬ್ಬಂದಿ ಹಣ ವಸೂಲಿ ಮಾಡಿರುವ ಬಗೆಗೆ ಪರಿಶೀಲಿಸಿ ಸಂಪೂರ್ಣ ಮಾಹಿತಿ ನೀಡುವಂತೆ ಅಲ್ಲಿನ ಡಿವೈಎಸ್​ಪಿ ಅವರಿಗೆ ತಿಳಿಸುತ್ತೇನೆ.

| ಕೆ.ಪರಶುರಾಮ ಎಸ್ಪಿ ಹಾವೇರಿ

 

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...