More

    ಭುಗಿಲೆದ್ದ ಹಿಜಾಬ್ ವಿವಾದ: ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲು ಸರ್ಕಾರಕ್ಕೆ ಕಾಂಗ್ರೆಸ್​ ಮನವಿ

    ಬೆಂಗಳೂರು: ಹಿಜಾಬ್-ಕೇಸರಿ ಶಾಲು ಸಂಘರ್ಷ ನಡೆಯುತ್ತಿರುವ ಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತಕ್ಷಣ ರಜೆ ಘೋಷಿಸಿ ಆನ್​ಲೈನ್ ತರಗತಿಯ ನಡೆಸಬೇಕು ಎಂದು ರಾಜ್ಯ ಸರ್ಕಾರವನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

    ನ್ಯಾಯಾಲಯದ ತೀರ್ಪು ಬರುವವರೆಗೂ ಕಾಯಬೇಕು. ಸಮಾಜದಲ್ಲಿ ಶಾಂತಿ ಕಾಪಾಡಲು ಒಂದು ಕಠಿಣ ತೀರ್ಮಾನ ಕೈಗೊಳ್ಳಿ. ನಮ್ಮ ದೇಶವನ್ನು ಇಡೀ ವಿಶ್ವ ನೋಡುತ್ತಿದೆ. ಇಂತಹ ಗೊಂದಲ, ಘಟನೆಗಳಿಗೆ ಅವಕಾಶ ಮಾಡಿಕೊಡಬೇಡಿ. ಶಾಲಾ-ಕಾಲೇಜುಗಳ ಆಡಳಿತ ಮಂಡಳಿಗಳು ಕೂಡ ಶಾಲೆ-ಕಾಲೇಜುಗಳನ್ನು ಒಂದು ವಾರ ಬಂದ್​ ಮಾಡಿ, ಪರಿಸ್ಥಿತಿ ತಿಳಿಯಾಗಲು ಸಹಕರಿಸಬೇಕು‌. ವಿದ್ಯಾರ್ಥಿಗಳು ಯಾವುದೇ ಪ್ರಚೋದನೆಗೆ ಒಳಗಾಗಬಾರದು. ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಶಾಂತಿ, ಸೌಹಾರ್ದತೆ ಕಾಪಾಡಬೇಕು ಎಂದು ಡಿಕೆಶಿ ಮನವಿ ಮಾಡಿದ್ದಾರೆ.

    ವಿದ್ಯಾರ್ಥಿಗಳು ಸಂಘರ್ಷಕ್ಕೆ ಇಳಿದಿರುವ ಕಡೆಗಳಲ್ಲಿ ಪುಂಡರ ಮೇಲೆ ಕಠಿಣ ಕ್ರಮ ಕೈಗೊಳ್ಳದೆ ಪೊಲೀಸರು ಮೂಕ ಪ್ರೇಕ್ಷಕರಾಗಿರುವುದು ಪಾಲಕರಲ್ಲಿ ಆತಂಕ ಹುಟ್ಟಿಸಿದೆ. ಪ್ರಾರಂಭದ ಹಂತದಲ್ಲೇ ಸ್ಥಳೀಯವಾಗಿ ಸೌಹಾರ್ದಯುತವಾಗಿ ಬಗೆಹರಿಸಬಹುದಾಗಿದ್ದ ಸರಳ‌ ಸಮಸ್ಯೆಯನ್ನು ರಾಜಕೀಯ ಕಾರಣಕ್ಕಾಗಿ ಉಲ್ಬಣಗೊಳಿಸಿರುವ ರಾಜ್ಯ ಸರ್ಕಾರ, ಇದೀಗ ನಿಯಂತ್ರಿಸಲಾಗದೆ ಕೈಚೆಲ್ಲಿ ಕೂತಿದೆ. ಸಮಸ್ಯೆ ಇತ್ಯರ್ಥಗೊಳಿಸುವ ಹೊಣೆಗಾರಿಕೆ ಹೊಂದಿರುವ ರಾಜ್ಯ ಶಿಕ್ಷಣ ಸಚಿವರು ಮತ್ತು ಗೃಹ ಸಚಿವರು ನೀಡುತ್ತಿರುವ ಪ್ರಚೋದನಾಕಾರಿ ಹೇಳಿಕೆ ಪರಿಸ್ಥಿತಿ ಬಿಗಡಾಯಿಸಲು ಕಾರಣವಾಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

    ಪರಿಸ್ಥಿತಿಯ ಗಂಭೀರತೆ ಅರಿತು ಸಿಎಂ ಮಧ್ಯೆ ಪ್ರವೇಶಿಸಬೇಕು. ಶಾಲಾ‌-ಕಾಲೇಜುಗಳಿಗೆ ತಾತ್ಕಾಲಿಕವಾಗಿ ರಜೆ ಘೋಷಿಸಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆ ಆಗದಂತೆ ಆನ್​ಲೈನ್​ ತರಗತಿ ಆರಂಭಿಸಬೇಕು ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

    ಭುಗಿಲೆದ್ದ ಹಿಜಾಬ್​ ವಿವಾದ: ಬನಹಟ್ಟಿಯಲ್ಲಿ ಕಲ್ಲು ತೂರಾಟ, ಕಾಲೇಜಿಗೆ ರಜೆ ಘೋಷಣೆ, ಪೊಲೀಸರಿಂದ ಲಾಠಿ ಚಾರ್ಜ್

    ನಿಮ್ಮ ಮಸೀದಿಯಲ್ಲಿ ನಿಮ್ಗೆ ಪ್ರವೇಶವಿಲ್ಲ, ಹಕ್ಕಿಗಾಗಿ ಅಲ್ಲಿ ಧ್ವನಿ ಎತ್ತಿ… ಶಿಕ್ಷಣ ವ್ಯವಸ್ಥೆಯಲ್ಲಿ ಹೋರಾಟ ಮಾಡ್ಬೇಡಿ: ನಾಗೇಶ್

    ಉಡುಪಿಯಲ್ಲಿ ಹಿಜಾಬ್ ವಿವಾದ: ಎಂಜಿಎಂ ಕಾಲೇಜಿಗೆ ಅನಿರ್ಧಿಷ್ಟಾವಧಿ ರಜೆ ಘೋಷಣೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts