ಬೆಂಗಳೂರಲ್ಲಿ ವಿಷ ಕುಡಿದು ಎಎಸ್ಐ ಪುತ್ರ ಆತ್ಮಹತ್ಯೆ

New Project(11)
Published on

ಆನೇಕಲ್: ಎಚ್ಎಸ್ಆರ್ ಪೊಲೀಸ್ ಠಾಣೆಯ ಎಎಸ್ಐ ನಾಗರಾಜ್ ಅವರ ಪುತ್ರ ಪ್ರಶಾಂತ್ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಗರದ ವಿಜಯ ಕಾಲೇಜಿನಲ್ಲಿ ಪ್ರಶಾಂತ್ ಬಿಕಾಂ ಓದುತ್ತಿದ್ದ. ಭಾನುವಾರ ರಾತ್ರಿ ಬೆಂಗಳೂರು ಹೊರವಲಯ ಎಲೆಕ್ಟ್ರಾನ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಕೂಡಲೇ ಈತನನ್ನು ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಎಲೆಕ್ಟ್ರಾನಿಕ್ ಸಿಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net