ಹುಬ್ಬಳ್ಳಿ ಗಲಾಟೆ ಸಂಬಂಧ ಅಮಾಯಕರಿಗೆ ತೊಂದರೆ ಕೊಡಬೇಡಿ: ಪೊಲೀಸರಿಗೆ ಎಚ್​ಡಿಕೆ ಮನವಿ

ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ಗಲಾಟೆ ಪ್ರಕರಣ ಸಂಬಂಧ ಅಮಾಯಕರಿಗೆ ತೊಂದರೆ ಕೊಡಬೇಡಿ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ತಿಳಿಗೇಡಿ ಯುವಕನ ಪ್ರಚೋದನಾತ್ಮಕ ಪೋಸ್ಟ್‌ನಿಂದ ಹುಬ್ಬಳ್ಳಿಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿ, ಕಿಡಿಗೇಡಿಗಳ ಜತೆಗೆ ಕೆಲ ಅಮಾಯಕರನ್ನೂ ಪೊಲೀಸರು ಬಂಧಿಸಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ. ಉದ್ರಿಕ್ತ ಮತಿಗೇಡಿ ಯುವಕರು ಎಸಗಿದ ಕೃತ್ಯಕ್ಕೆ ಸಂಬಂಧವಿಲ್ಲದವರನ್ನೂ ವಶಕ್ಕೆ ಪಡೆಯಲಾಗಿದೆ. ಕೆಲ ಕುಟುಂಬಗಳ ತಂದೆ-ತಾಯಂದಿರು ನನಗೆ ನಿರಂತರವಾಗಿ ಮೊಬೈಲ್ ಕರೆ ಮಾಡಿ ಕಣ್ಣೀರು ಹಾಕುತ್ತಿದ್ದಾರೆ. ಈ ಬಗ್ಗೆ ನಾನು ಈಗಾಗಲೇ … Continue reading ಹುಬ್ಬಳ್ಳಿ ಗಲಾಟೆ ಸಂಬಂಧ ಅಮಾಯಕರಿಗೆ ತೊಂದರೆ ಕೊಡಬೇಡಿ: ಪೊಲೀಸರಿಗೆ ಎಚ್​ಡಿಕೆ ಮನವಿ