ಸರಳ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಭೀಕರ ಕೊಲೆ: ಬೆಚ್ಚಿಬಿದ್ದ ಹುಬ್ಬಳ್ಳಿ ಜನತೆ

blank

ಹುಬ್ಬಳ್ಳಿ: ನಗರದ ಖಾಸಗಿ ಹೋಟೆಲ್​ನಲ್ಲಿ ಸರಳ ವಾಸ್ತು ಸಂಸ್ಥಾಪಕ ಚಂದ್ರಶೇಖರ ಗುರೂಜಿ ಅವರನ್ನ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ವಿದ್ಯಾನಗರದ ಪ್ರಸಿಡೆಂಟ್​ ಹೋಟೆಲ್​ನಲ್ಲಿ ಚಂದ್ರಶೇಖರ ಗುರೂಜಿ ತಂಗಿದ್ದರು. ಮಂಗಳವಾರ ಬೆಳಗ್ಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ಆಯುಕ್ತ ಲಾಭೂರಾಮ, ಡಿಸಿಪಿ ಸಾಹಿಲ್ ಬಾಗ್ಲಾ ಪರಿಶೀಲನೆ ನಡೆಸಿದ್ದಾರೆ. ಜ್ಯೋತಿಷ್ಯದಿಂದ ನೊಂದವರು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಭಕ್ತರ ಸೋಗಿನಲ್ಲಿ ಬಂದ ಕಿಡಿಗೇಡಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಚಾಕು ಹಿಡಿದು ಹೋಟೆಲ್​ನಿಂದ ಹೊರಗೆ ಓಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸರಳ ವಾಸ್ತುವಿನ ಸಂಶೋಧಕರಾಗಿದ್ದ ಡಾ.ಚಂದ್ರಶೇಖರ ಅಂಗಡಿ(ಗುರೂಜಿ) ಅವರು ಚಿಕ್ಕಂದಿನಲ್ಲೇ ಆಧ್ಯಾತ್ಮದತ್ತ ಆಸಕ್ತಿ ಹೊಂದಿದ್ದರು. 8 ವರ್ಷ ವಯಸ್ಸಿನಲ್ಲಿದ್ದಾಗಲೇ ತಮ್ಮೂರಿನ ಹಳೆಯ ದೇವಾಲಯವೊಂದರ ಜೀರ್ಣೋದ್ಧಾರಕ್ಕಾಗಿ ಜನರಿಂದ ದೇಣಿಗೆ ಸಂಗ್ರಹಿಸಿ ಅಭಿವೃದ್ಧಿ ಮಾಡಿದ್ದರು. 14ನೇ ವಯಸ್ಸಿನಲ್ಲಿ ಭಾರತೀಯ ಸೇನೆಗೆ ಸೇರಬೇಕೆಂಬ ಬಯಕೆ ಅವರದ್ದಾಗಿತ್ತಾದರೂ ಅನಾರೋಗ್ಯ ಕಾರಣಕ್ಕೆ ಅದು ಸಾಕಾರಗೊಳ್ಳಲಿಲ್ಲ. ಸಿವಿಲ್ ಇಂಜಿನಿಯರ್​ ಪದವಿ ಪಡೆದ ಬಳಿಕ ಮುಂಬೈನಲ್ಲಿ ಕಾಂಟ್ರ್ಯಾಕ್ಟರ್ ಆಗಿ ಕೆಲಸ ಆರಂಭಿಸಿದ್ದರು. 1995 ರಲ್ಲಿ “ಶರಣ ಸಂಕುಲ ಟ್ರಸ್ಟ್” ಆರಂಭಿಸಿ ಸಾಮಾಜಿಕ ಕಾರ್ಯದಲ್ಲಿ ನಿರತರಾಗಿದ್ದರು.

1998ರಲ್ಲಿ ಅವರಿಗೆ ಕನಸಿನಲ್ಲಿ ತಮ್ಮ ಮನೆಯ ಆಕಾರ ಕಾಣಿಸತೊಡಗಿತು ಹಾಗೂ ಕನಸುಗಳನ್ನು ನನಸಾಗಿಸಿಕೊಳ್ಳುವ ಮಾರ್ಗದ ಬಗ್ಗೆ ಆಲೋಚಿಸ ತೊಡಗಿದರು. ಪೂರ್ವಜರು ತಿಳಿವಳಿಕೆ ಹಾಗೂ ಸಂಪನ್ಮೂಲ ಕ್ರೂಡೀಕರಿಸಿ ಸುಂದರ ಕಲಾಕೃತಿಗಳನ್ನು, ಶಾಸ್ತ್ರಗಳನ್ನು ಹೇಗೆ ರೂಪಿಸಿದ್ದರು ಮತ್ತು ಇದು ದೈನಂದಿನ ಬದುಕಿನಲ್ಲಿ ಏಕೆ ಅಗತ್ಯ ಎಂಬುದರ ಬಗ್ಗೆ ತಿಳಿಯುತ್ತಾ ಹೋದರು. ನಂತರ ‘ಸರಳವಾಸ್ತು’ ಬಗ್ಗೆ ಸಂಶೋಧನೆ ಮಾಡುತ್ತಾ ಹೋದರು. ಜನರಿಗೆ ಸರಳ ವಾಸ್ತುವಿನ ಬಗ್ಗೆ ಅರಿವು ಮೂಡಿಸುವ ಕಾಯಕದಲ್ಲಿ ಚಂದ್ರಶೇಖರ ಗುರೂಜಿ ನಿರತವಾಗಿದ್ದರು. ಪ್ರತ್ಯೇಕ ವಾಹಿನಿ ತೆರೆದು ವಾಸ್ತು ಬಗ್ಗೆ ಮಾಹಿತಿ ನೀಡುತ್ತಿದ್ದರು. ಇವರ ಸಾವಿನ ಸುದ್ದಿ ಜನರಿಗೆ ಆಘಾತ ನೀಡಿದೆ.

ಹತ್ಯೆಗೂ ಮುನ್ನ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಮುಂದೆ ಹಂತಕರ ಹೈಡ್ರಾಮ ಹೀಗಿತ್ತು…

ಸರಳ ವಾಸ್ತು ಸಂಸ್ಥೆಯ ಮಾಜಿ ಉದ್ಯೋಗಿ ಗಂಡನಿಂದಲೇ ಚಂದ್ರಶೇಖರ ಗುರೂಜಿ ಹತ್ಯೆ! ಬಯಲಾಗ್ತಿದೆ ಒಂದೊಂದೇ ರಹಸ್ಯ

ದಯವಿಟ್ಟು ನನ್ನ ಮಗನಿಗೆ ಯಾರೂ ಸಾಲ ಕೊಡ್ಬೇಡಿ… ಸುಳ್ಳು ಹೇಳಿ ಜನರಿಗೆ ಮೋಸ ಮಾಡ್ತಿದ್ದಾನೆ: ಮಾಜಿ ಶಾಸಕ ಮನವಿ

Share This Article

Spirituality: ಇರುವೆಗಳಿಗೆ ಆಹಾರ ನೀಡಿದರೆ ಶನಿದೇವನ ಪ್ರಭಾವ ಇರುವುದಿಲ್ಲವೇ?

Spirituality: ನಮ್ಮಲ್ಲಿರುವ ವಸ್ತು ಅಥವಾ ಯಾವುದೇ ಪದಾರ್ಥವನ್ನು ಇಲ್ಲದವರಿಗೆ ದಾನ ಮಾಡಿದರೆ ದೇವರ ಅನುಗ್ರಹ ಸದಾ…

2025ರಲ್ಲಿ ಸಾಲದ ಸುಳಿಗೆ ಸಿಲುಕಲಿದ್ದಾರಂತೆ ಈ 3 ರಾಶಿಯವರು!? ಹಣಕಾಸಿನ ವಿಚಾರದಲ್ಲಿ ಬಹಳ ಎಚ್ಚರ | Money

Money : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು…

30 ನೇ ವಯಸ್ಸಿನಲ್ಲಿಯೇ ಕೂದಲು ಬಿಳಿ ಬಣ್ಣಕ್ಕೆ ತಿರುಗುತ್ತಿದೆಯೇ? White Hair ಆಗಿದ್ರೆ ಇಲ್ಲಿದೆ ಉಪಯುಕ್ತ ಮಾಹಿತಿ

White Hair : ಇಂದಿನ ಕಾಲದಲ್ಲಿ ಜನರ ಕೂದಲು ಚಿಕ್ಕ ವಯಸ್ಸಿನಲ್ಲೇ ಬೆಳ್ಳಗಾಗುತ್ತಿದೆ. ಇನ್ನು ಕೆಲವರು…